Advertisement
ಬಸ್ ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಬರುತ್ತಿತ್ತು, ಈ ವೇಳೆ ಎದುರುಗಡೆ ಬಂದ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬಸ್ ಎರಡೂ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ 15 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.
Related Articles
Advertisement
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಇತ್ತೀಚೆಗೆ ಸಾಮಾನ್ಯವಾಗಿದ್ದು, ಕಳಪೆ ರಸ್ತೆಗಳು, ಕಳಪೆ ನಿರ್ವಹಣೆಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ತಿಂಗಳು, ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರಯಾಣಿಕರ ಕೋಚ್ ಕಂದಕಕ್ಕೆ ಬಿದ್ದು ಕನಿಷ್ಠ 41 ಜನರು ಸಾವನ್ನಪ್ಪಿದ್ದರು.