Advertisement

ಸಂತ್ರಸ್ತರಿಗೆ 30 ಸಾವಿರ ಆಹಾರ ಕಿಟ್ ವಿತರಣೆ: ಡಿಸಿ

10:18 AM Aug 14, 2019 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ನೆರೆಹಾನಿ ಹಾಗೂ ಪ್ರಕೃತಿ ವಿಕೋಪದಿಂದಾಗಿ ಹಾನಿಗೊಳಗಾಗಿರುವ ಸಂತ್ರಸ್ತರು ಪರಿಹಾರ ಕೇಂದ್ರದಿಂದ ತಮ್ಮ ಮನೆಗಳಿಗೆ ಹಿಂದಿರುಗಿದ ನಂತರ 30 ಸಾವಿರ ಕುಟುಂಬಗಳಿಗೆ ವಿಶೇಷ ಆಹಾರ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.ಮಂಗಳವಾರ ನಗರದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತಕ್ಕೆ ಭೇಟಿ ನೀಡಿ ಜಿಲ್ಲೆಯ ಸಂತ್ರಸ್ತರು ಮರಳಿ ಮನೆಗೆ ಹೋಗುವಾಗ ನೀಡಲು ವಿಶೇಷ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಿ ಮಾತನಾಡಿದ ಅವರು, ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಉಚಿತವಾಗಿ ನೀಡುವ ಈ ವಿಶೇಷ ಪ್ಯಾಕೇಟ್‌ನಲ್ಲಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ, 1 ಕೆಜಿ ತೊಗರಿಬೆಳೆ, 1 ಕೆಜಿ ಸಕ್ಕರೆ, 1 ಕೆಜಿ ಆಯೋಡಿನ್‌ ಯುಕ್ತ ಉಪ್ಪು 1 ಲೀಟರ್‌ ತಾಳೆ ಎಣ್ಣೆ ಹಾಗೂ ಐದು ಲೀಟರ್‌ ಸೀಮೆ ಎಣ್ಣೆಯನ್ನು ಒಳಗೊಂಡಿರುತ್ತದೆ. ಆಹಾರ ಕಿಟ್‌ಗಳನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮೂಲಕ ಸಂತ್ರಸ್ತರ ಕುಟುಂಬಗಳಿಗೆ ವಿತರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Advertisement

ಕಿಟ್ ಸಿದ್ಧಪಡಿಸುತ್ತಿರುವ ಸಿಬ್ಬಂದಿಗೆ ಗುಣಮಟ್ಟದ ಪದಾರ್ಥ ನೀಡಲು ಹಾಗೂ ನಿಯಮಾನುಸಾರ ಪಾಕೆಟ್ ಸಿದ್ಧಪಡಿಸಲು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೆಷನರಿ ಅಧಿಕಾರಿ ಗರಿಮಾ ಪವಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next