Advertisement

ಪುತ್ತೂರಿನಲ್ಲಿ 300 ಹಾಸಿಗೆ ಆಸ್ಪತ್ರೆ ನೀಲನಕಾಶೆ ಸಿದ್ಧ: ಶಾಸಕ

09:40 AM Apr 13, 2022 | Team Udayavani |

ಪುತ್ತೂರು: ಪುತ್ತೂರು ಉಪ ವಿಭಾಗದಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕೊಡುವ ನಿಟ್ಟಿನಲ್ಲಿ ಅಂದಾಜು 180 ಕೋ.ರೂ. ವೆಚ್ಚದಲ್ಲಿ 300 ಹಾಸಿಗೆಯ ಸರಕಾರಿ ಆಸ್ಪತ್ರೆಗೆ ನೀಲ ನಕಾಶೆ ಸಿದ್ಧಪಡಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

Advertisement

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಹಾ ಯಕ ಕಮಿಷನರ್‌ ಗಿರೀಶ್‌ ನಂದನ್‌, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಎಂಜಿನಿಯರ್‌ ಗಳ ಉಪಸ್ಥಿತಿಯಲ್ಲಿ ನಡೆದ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಇಲ್ಲಿ 300 ಹಾಸಿಗೆಯ ಆಸ್ಪತ್ರೆ ಆಗಬೇಕೆಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ಆರೋಗ್ಯ ಇಲಾಖೆ ಪ್ರಸ್ತಾವನೆಯನ್ನು ಸ್ವೀಕಾರ ಮಾಡಿದೆ. ಇದಲ್ಲದೆ ಸದನದಲ್ಲೂ ಈ ವಿಚಾರ ಪ್ರಸ್ತಾವಿಸಿದಾಗ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೇ ಈ ಕುರಿತು ಸಭೆ ನಡೆಸಿ ಮಾಹಿತಿ ಪಡೆಯುವುದಾಗಿ ಸಚಿವರು ಭರವಸೆ ನೀಡಿದ್ದರು. ಅದರಂತೆ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಸಂಬಂಧಿಸಿದ ಎಂಜಿನಿಯರ್‌ಗಳು ಸಭೆಯಲ್ಲಿ ಭಾಗವಹಿಸಿ ಆಸ್ಪತ್ರೆಯ ಜಾಗ ಮತ್ತು ಮುಂದೆ ಲಭ್ಯ ಇರುವ ಸ್ಥಳಾವಕಾಶದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಈಗಿರುವ ನೀಲ ನಕಾಶೆ ಬದಲಾವಣೆ ಮಾಡಿ ಭೌಗೋಳಿಕವಾಗಿ ಇಲ್ಲಿನ ಸ್ಥಳಕ್ಕೆ ಸರಿ ಯಾಗಿ ತೀರ್ಮಾನಕ್ಕೆ ಬಂದು ಅಂತಿಮ ಗೊಳಿಸಲಾಗುವುದು. ಒಟ್ಟಿನಲ್ಲಿ ಪುತ್ತೂರಿ ಗೊಂದು ಸರಕಾರಿ ಮೆಡಿಕಲ್‌ ಕಾಲೇಜು ಬರಬೇಕು. ಅದಕ್ಕೆ ಪೂರಕವಾಗಿ ಸುಸಜ್ಜಿತ 300 ಹಾಸಿಗೆಯ ಆಸ್ಪತ್ರೆಯಾಗಬೇಕಾಗಿದೆ ಎಂದು ಮಠಂದೂರು ಹೇಳಿದರು.

ಸ್ಥಳ ಪರಿಶೀಲನೆ

Advertisement

ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಸರಕಾರಿ ಆಸ್ಪತ್ರೆಯ ಸ್ಥಳ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್‌ ಗಿರೀಶ್‌ ನಂದನ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್‌ ರೈ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಆಶಾ ಪುತ್ತೂರಾಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಫೀಕ್‌ ದರ್ಬೆ, ವಿದ್ಯಾ ಆರ್‌. ಗೌರಿ, ಡಾ| ಕೃಷ್ಣ ಪ್ರಸನ್ನ, ಕೃಷ್ಣ ನಾಯ್ಕ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಜಾರಾಮ್, ಜಿಲ್ಲಾ ಆರೋಗ್ಯ ಇಲಾಖೆಯ ಎಂಜಿನಿಯರ್‌ಗಳು, ಸರಕಾರಿ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next