Advertisement

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ

12:03 PM Nov 19, 2020 | keerthan |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

Advertisement

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್‌ ಸಮ್ಮಿಟ್‌ -2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು.

ಇದನ್ನೂ ಓದಿ:ಬೆಂಗಳೂರು ಟೆಕ್ ಸಮಿಟ್-2020 ಗೆ ಸಿಎಂ ಯಡಿಯೂರಪ್ಪ ಚಾಲನೆ

ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್‌ ಡಿಜಿಟಲ್‌ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಹೇಳಿದರು.

ಡಿಜಿಟಲ್‌ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್‌ ಎಕಾನಮಿ ಮಿಷನ್‌ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್‌ ಉದ್ದೇಶವಾಗಿದೆ. ಡಿಜಿಟಲ್‌ ಎಕಾನಮಿ ಮಿಷನ್‌ ಮೂಲಕ ಇನ್‌ವೆಸ್ಟ್‌ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್‌ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next