Advertisement

ರಸ್ತೆ ದುರಸ್ತಿಗೆ 300 ಕೋಟಿ ರೂ.: ಸಚಿವ ಸಿ.ಸಿ. ಪಾಟೀಲ್‌

10:03 PM Sep 20, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಇತರ ಆಸ್ತಿಗಳ ದುರಸ್ತಿ ಕಾಮಗಾರಿಗೆ 300 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ರಸ್ತೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳ ದರುಸ್ತಿಗೆ 300 ಕೋಟಿ ರೂ. ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ರಸ್ತೆಗಳ ದುರಸ್ತಿಗೆ 200 ಕೋಟಿ ರೂ. ಮಂಜೂರು ಮಾಡಲಾಗಿದೆ. ಮಳೆ ನಿಂತ ಮೇಲೆ ಜಿಲ್ಲಾವಾರು ನಷ್ಟದ ಪ್ರಮಾಣಕ್ಕೆ ಅನುಗುಣವಾಗಿ ಹಣ ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next