ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಮಿತಿ ಮೀರುತ್ತಿದೆ. ಜಿಲ್ಲೆಯಲ್ಲಿ ಇದು ವರೆಗೂ 350 ಸೋಂಕು ಪತ್ತೆಯಾಗಿದ್ದು, 148 ಮಂದಿ ಚಿಕಿತ್ಸೆ ಬಳಿಕ ಸಂಪೂರ್ಣ ಗುಣ ಮುಖರಾಗಿ ಮನೆಗೆ ತೆರಳಿದ್ದಾರೆ.
ಇದರಲ್ಲಿ 195 ಸೋಂಕಿತ ವ್ಯಕ್ತಿಗಳು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಸೇರಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ 264 ಪ್ರಕರಣ ಪತ್ತೆಯಾಗಿದ್ದು, 106 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 151 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.
ಕಂಟೈನ್ಮೆಂಟ್ ವಲಯ: ದೇವನಹಳ್ಳಿ 24, ದೊಡ್ಡಬಳ್ಳಾಪುರ 30, ಹೊಸಕೋಟೆ 42, ನೆಲಮಂಗಲ 35 ಕಂಟೈನ್ಮೆಂಟ್ ವಲಯಗಳಿವೆ. ದೇವನಹಳ್ಳಿ ತಾಲೂಕಿ ನಲ್ಲಿ 51 ಸೋಂಕಿತರ ಕಂಡುಬಂದಿದ್ದು, 51 ಮಂದಿ ಗುಣಮುಖರಾಗಿದ್ದಾರೆ. 36 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಯಾವುದೇಸಾವು ಸಂಭವಿಸಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 52 ಕೋವಿಡ್ ಪ್ರಕರಣ ಕಂಡುಬಂದಿದ್ದು, 15 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇಬ್ಬರು 2 ಸೋಂಕಿನಿಂದ ಸಾವನ್ನಪ್ಪಿದ್ದು, 35 ಸಕ್ರಿಯ ಪ್ರಕರಣಗಳಿವೆ. ಸೋಂಕಿತರು ದೊಡ್ಡಬಳ್ಳಾಪುರ ಕೋವಿಡ್ ಆಸ್ಪತ್ರೆ, ಬೆಂಗಳೂರಿನ ಹಝ್ ಭವನ, ಗೊಲ್ಲಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ತಾಲೂಕಿನಲ್ಲಿ 61 ಪ್ರಕರಣ ದೃಢಪಟ್ಟಿದ್ದು, 17 ಮಂದಿ ಗುಣ ಮುಖರಾಗಿದ್ದಾರೆ. ಇಬ್ಬರು ಸಾವನ್ನ ಪ್ಪಿದ್ದು, 41 ಸಕ್ರಿಯ ಪ್ರಕರಣಗಳಾಗಿವೆ.
ಹೊಸಕೋಟೆಯಲ್ಲಿ ಶತಕ: ತಾಲೂಕಿನಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಈವರೆಗೆ ಬರೋಬ್ಬರಿ 100 ಪ್ರಕರಣ ದಾಖಲಾಗಿದೆ. ಈ ಪೈಕಿ 59 ಮಂದಿ ಗುಣಮುಖರಾಗಿದ್ದು, 39 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ 2 ಕೋವಿಡ್ ಸೋಂಕಿನಿಂದ ಗುಣಮುಖವಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿತರಲ್ಲಿ 86 ಹೊರ ಜಿಲ್ಲೆ, ರಾಜ್ಯಕ್ಕೆ ಸೇರಿದ್ದಾರೆ. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಗೆ ಒಳಪಡಿಸಿದಾಗ ಪತ್ತೆ ಯಾದ ಪ್ರಕರಣಗಳಾಗಿದ್ದು, ಇದರಲ್ಲಿ 42 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. 44 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಡಿಎಚ್‌ಒ ಡಾ. ಮಂಜುಳಾದೇವಿ ತಿಳಿಸಿದ್ದಾರೆ.