Advertisement

ಕೋವಿಡ್ ಕಳವಳ: ರಾಜ್ಯದಲ್ಲಿ 308 ಮಂದಿಗೆ ಕೋವಿಡ್ ಸೋಂಕು ದೃಢ, 209 ಮಂದಿ ಬಿಡುಗಡೆ

06:30 PM Jun 13, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಇಂದು 308 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ರಾಜ್ಯದ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ.

Advertisement

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು 14 ಜನರಿಗೆ ಕೋವಿಡ್- 19 ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಸಾವಿರದ ಗಡಿ ದಾಟಿದ ಮೊದಲ ಜಿಲ್ಲೆಯಾಗಿದೆ.

ಇಂದು ಕಲಬುರಗಿ ಜಿಲ್ಲೆಯಲ್ಲಿ 67 ಜನರಿಗೆ ಕೋವಿಡ್ ಸೋಂಕು ತಾಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ 52 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ.

ಬೀದರ್ ಜಿಲ್ಲೆಯಲ್ಲಿ 42 ಮಂದಿಗೆ ಸೋಂಕು ತಾಗಿದ್ದು, ಬೆಂಗಳೂರು ನಗರದಲ್ಲಿ 31 ಮಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಮಂದಿಗೆ, ಧಾರವಾಡ ಜಿಲ್ಲೆಯಲ್ಲಿ 20 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ಇಂದು ದೃಢವಾಗಿದೆ.

ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತಲಾ 11 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು, ವಿಜಯಪುರದಲ್ಲಿ ಆರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಐವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.

Advertisement

ಕೋಲಾರ ಜಿಲ್ಲೆಯಲ್ಲಿ ನಾಲ್ವರಿಗೆ ಸೋಂಕು ತಾಗಿದ್ದು, ದಾವಣಗೆರೆಯಲ್ಲಿ ಮೂರು ಪ್ರಕರಣಗಳು, ಮಂಡ್ಯ ಮತ್ತು ಹಾವೇರಿಯಲ್ಲಿ ತಲಾ ಎರಡು, ಮೈಸೂರು, ಬಾಗಲಕೋಟೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣಗಳು ದೃಢವಾಗಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇಂದು ಮಂದಿ 209 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ3648 ಒಟ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳಿದ್ದಾರೆ. ಇಂದು ಮೂರು ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಮೂವರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next