Advertisement
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರವು ಸುಮಾರು 2 ವರ್ಷಗಳಿಂದ ಗುತ್ತಿಗೆದಾರರಿಗೆ ಪಾವತಿಸಬೇಕಾದ ಬಾಕಿ ಮೊತ್ತವನ್ನು ಉಳಿಸಿಕೊಂಡಿದೆ. ಇದನ್ನು ಹಂತ ಹಂತವಾಗಿಯಾದರೂ ಬಿಡುಗಡೆ ಮಾಡಬೇಕು ಎಂದರು.
ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಮುಖ್ಯ ಮಂತ್ರಿಯವರನ್ನೂ ಸೇರಿದಂತೆ ವಿವಿಧ ಇಲಾಖೆಯ ಸಚಿವರನ್ನೂ ಹಲವು ಬಾರಿ ಭೇಟಿ ಮಾಡಿದ್ದೇವೆ. ಆದರೂ ಸರಕಾರ ನಮ್ಮೆಡೆಗೆ ಯಾವುದೇ ಗಮನ ಹರಿಸುತ್ತಿಲ್ಲ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಆರ್.ಡಿ.ಪಿ.ಆರ್ ಮತ್ತು ಬಿಬಿಎಂಪಿಗಳಿಂದ ಹೆಚ್ಚಿನ ಪಾವತಿ ಬಾಕಿ ಉಳಿದಿದೆ. ಇನ್ನು ಒಂದು ತಿಂಗಳ ಒಳಗಾಗಿ ಒಟ್ಟು ಬಾಕಿ ಮೊತ್ತದ ಕನಿಷ್ಠ ಶೇ .50ರಷ್ಟು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.