ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಗುರುವಾರ ಬಿಬಿಎಂಪಿ ವ್ಯಾಪ್ತಿಯ ಹದಿನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಲಾಗಿದೆ.
ರಾಜರಾಜೇಶ್ವರಿನಗರ, ಬ್ಯಾಟರಾಯನಪುರ ಕ್ಷೇತ್ರಗಳ ಆಕ್ಷಾಂಕ್ಷಿಗಳ ವಿಚಾರದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಭೆಯಲ್ಲಿದ್ದ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಯಿತು ಎಂದು ಹೇಳಲಾಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ತುಳಸಿ ಮುನಿರಾಜುಗೌಡ ಅವರ ಹೆಸರು ಒಂದು ಬಣ ಪ್ರಸ್ತಾಪಿಸಿದಾಗ, ಮತ್ತೂಂದು ಬಣ ಶಿಲ್ಪಾ ಗಣೇಶ್ ಅವರ ಹೆಸರು ಪ್ರಸ್ತಾಪ ಮಾಡಿತು. ರಾಷ್ಟೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ತುಳಸಿ ಮುನಿರಾಜುಗೌಡ ಪರವಾಗಿ ಒಲವು ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಮತ್ತೂಂದೆಡೆ ಬ್ಯಾಟರಾನಪುರ ಕ್ಷೇತ್ರದ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರ ಸಂಬಂಧಿ ರವಿ, ಪಾಲಿಕೆ ಸದಸ್ಯ ಮುನೀಂದ್ರ ಕುಮಾರ್ ಹಾಗೂ ಸ್ಥಳೀಯ ಮುಖಂಡ ರಾಜ್‌ಗೊàಪಾಲ್ ಪರ ಬೆಂಬಲಿಗರು ಟಿಕೆಟ್‌ಗಾಗಿ ಬೇಡಿಕೆ ಇರಿಸಿದರು.
ಎರಡು ದಶಕದಿಂದ ಪಕ್ಷಕ್ಕಾಗಿ ದುಡಿದಿರುವ ರಾಜ್‌ಗೊàಪಾಲ್‌ಗೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಕಷ್ಟ ಎಂದು ಕೆಲವರು ಹೇಳಿದರು ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಗುರುವಾರ ಬೆಂಗಳೂರು ಹಾಗೂ ನಗರ ಜಿಲ್ಲೆಯ 14 ಕ್ಷೇತ್ರಗಳಿಗೆ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಲಾಯಿತು ಎಂದು ತಿಳಿದು ಬಂದಿದೆ.
ಶಿಲ್ಪಾ ಜತೆ ಸೆಲ್ಫಿ: ಗುರುವಾರ ರೆಸಾರ್ಟ್‌ನಲ್ಲಿ ಸಭೆ ನಡೆಯುತ್ತಿರುವಾಗ ಮಾಳವಿಕ ಜತೆ ಆಗಮಿಸಿದ ಶಿಲ್ಪಾ ಗಣೇಶ್ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಜಿಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರು ಮುಗಿಬಿದ್ದರು.