Advertisement

32 ಪ್ರಯೋಗಾಲಯ ಆರಂಭ: ಶ್ರೀರಾಮುಲು

12:33 AM May 09, 2020 | Sriram |

ಚಿತ್ರದುರ್ಗ: ಕೋವಿಡ್‌-19ಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 32 ಪ್ರಯೋಗಾಲಯಗಳನ್ನು ಆರಂಭಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

Advertisement

ಪತ್ರಕರ್ತರೊಂದಿಗೆ ಮಾತನಾಡಿ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪರೀಕ್ಷೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಕೋವಿಡ್‌-19ಕ್ಕೆ ಸಂಬಂಧಪಟ್ಟಂತೆ 6 ರಿಂದ 7 ಸಾವಿರದಷ್ಟು ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಯಬೇಕಿದೆ. ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ ಪ್ರಯೋಗಾಲಯಗಳ ಆರಂಭಕ್ಕೆ ಒತ್ತು ನೀಡಲಾಗುವುದು ಎಂದರು.

ಟಾಸ್ಕ್ ಫೋರ್ಸ್‌ ಸಭೆಯ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್‌ ಮಾಡಲಾಗುವುದು. ಪರೀಕ್ಷೆಯ ವರದಿ ನೆಗೆಟಿವ್‌ ಬಂದ ಅನಂತರ ಅವರನ್ನು ಮನೆಗೆ ಕಳುಹಿಸಲಾಗುವುದು. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಆಕ್ಸಿಜನ್‌ ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಹಾಟ್‌ಸ್ಪಾಟ್‌ಗಳಲ್ಲಿನ ಸ್ಯಾಂಪಲ್ಸ್‌ನ್ನು ಕಿಯೋಕ್ಸ್‌ ಮೂಲಕ ಸಂಗ್ರಹಿಸಲಾಗುವುದು. ಜತೆಗೆ ಹಾಟ್‌ಸ್ಪಾಟ್‌ಗಳಲ್ಲಿ ಹೆಚ್ಚಿನ ಫೀವರ್‌ ಕ್ಲಿನಿಕ್‌ ಪ್ರಾರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೋವಿಡ್‌-19 ಸೋಂಕಿನ ಬಗ್ಗೆ ಐಸಿಎಂಆರ್‌ 75 ಜಿಲ್ಲೆಗಳಲ್ಲಿ ಅಧ್ಯಯನ ಮಾಡುತ್ತಿದೆ. ಈ ತಂಡದ ನೇತೃತ್ವವನ್ನು ಡಾ| ರಣದೀಪ್‌ ವಹಿಸಿಕೊಂಡಿದ್ದು, ಇವರು ನೀಡುವ ವರದಿಯನ್ನಾಧರಿಸಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ಹಸುರು ವಲಯದಲ್ಲಿರುವವರು ಕೇಂದ್ರ ಮತ್ತು ರಾಜ್ಯ ಸರಕಾರದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next