Advertisement

ಕೊಡಗು:ಒಂದೇ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್

04:24 PM Oct 28, 2021 | Team Udayavani |

ಮಡಿಕೇರಿ: ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

Advertisement

ವಿದ್ಯಾರ್ಥಿಗಳು 9 ರಿಂದ 12 ನೇ ತರಗತಿಗೆ ಸೇರಿದವರಾಗಿದ್ದು, ಯಾವುದೇ ಗಂಭೀರ ರೋಗ ಲಕ್ಷಣಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಗಾಳಿಬೀಡು ಅವರು ಗುರುವಾರ ಶಾಲಾ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಯ ಕೆಲ ವಿದ್ಯಾರ್ಥಿಗಳಿಗೆ ಒಂದು ವಾರದಿಂದ ಶೀತ ಮತ್ತು ಕೆಮ್ಮು ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರಲ್ಲಿ 270 ಮಂದಿಯನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 22 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿತ್ತು,  ನಂತರ ನಡೆಸಿದ ಪರೀಕ್ಷೆಯಲ್ಲಿ ಇನ್ನೂ 10 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಬಂದಿದೆ.ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು,ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಜಿಲ್ಲೆಯಲ್ಲಿ 8 ರಿಂದ 10 ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದವು, ಆದರೆ ದೈನಂದಿನ ಎಣಿಕೆ ಈಗ 30 ಕ್ಕೆ ಏರಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next