Advertisement

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

08:56 AM Apr 15, 2024 | Team Udayavani |

ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಕಳೆದ ಮೂರೂ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದ ಮೂರು ದಿನಗಳಲ್ಲಿ ಕನಿಷ್ಠ 33 ಜನರು ಮೃತಪಟ್ಟಿದ್ದಾರೆ ಮತ್ತು ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

Advertisement

ಭಾರಿ ಮಳೆಯಿಂದ ರಾಜಧಾನಿ ಕಾಬೂಲ್ ಮತ್ತು ಹಲವಾರು ಪ್ರಾಂತ್ಯಗಳಲ್ಲಿ ಹಠಾತ್ ಪ್ರವಾಹಗಳು ಸಂಭವಿಸಿವೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣೆಯ ರಾಜ್ಯ ಸಚಿವಾಲಯದ ತಾಲಿಬಾನ್ ವಕ್ತಾರ ಅಬ್ದುಲ್ಲಾ ಜನನ್ ಸೈಕ್ ಹೇಳಿದ್ದಾರೆ. ಈ ಘಟನೆಯಿಂದ ಸುಮಾರು 200 ಜಾನುವಾರುಗಳು ಜೀವ ಕಳೆದುಕೊಂಡರೆ 600 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ಅವರು ಹೇಳಿದ್ದಾರೆ.

ಭಾರಿ ಪ್ರವಾಹದಿಂದ ಸುಮಾರು 800 ಹೆಕ್ಟೇರ್ ಕೃಷಿ ಭೂಮಿಯನ್ನು ಮತ್ತು 85 ಕಿಲೋಮೀಟರ್ (53 ಮೈಲು) ಗಿಂತ ಹೆಚ್ಚಿನ ರಸ್ತೆಗಳು ಹಾನಿಗೊಂಡಿದೆ ಎಂದು ಹೇಳಲಾಗಿದೆ, ಹಠಾತ್ ಸಂಭವಿಸಿದ ಪ್ರವಾಹದಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಪಶ್ಚಿಮ ಫರಾಹ್, ಹೆರಾತ್, ದಕ್ಷಿಣ ಝಬುಲ್ ಮತ್ತು ಕಂದಹಾರ್ ಅತಿ ಹೆಚ್ಚು ಹಾನಿಗೊಳಗಾದ ಪ್ರಾಂತ್ಯಗಳಲ್ಲಿ ಸೇರಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Advertisement

Udayavani is now on Telegram. Click here to join our channel and stay updated with the latest news.

Next