Advertisement
ಮಸೂದೆ ಅಂಗೀಕಾರಗೊಂಡು, ಅಧಿಸೂಚನೆಯೊಂದಿಗೆ ಎಲ್ಲ ಪ್ರಕ್ರಿಯೆಗಳು ಅಂದುಕೊಂಡಂತೆ ನಡೆದರೆ, ರಾಜ್ಯದಲ್ಲಿ ಲೋಕಸಭೆಯ ಈಗಿನ ಲೆಕ್ಕಾಚಾರದ ಪ್ರಕಾರ 28 ಮತ್ತು ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಶೇ. 33ರಷ್ಟು ಅಂದರೆ ಕ್ರಮವಾಗಿ 9- 10 ಹಾಗೂ 74 ಕ್ಷೇತ್ರಗಳಲ್ಲಿ ಭವಿಷ್ಯದಲ್ಲಿ ಮಹಿಳೆಯರು ಪಾರುಪತ್ಯ ಮೆರೆಯಲಿದ್ದಾರೆ.
Related Articles
ಬಿ. ಎಸ್. ಯಡಿಯೂರಪ್ಪ, ಮಾಜಿ ಸಿಎಂ
Advertisement
ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿರುವುದು ಕ್ರಾಂತಿಕಾರಿ ನಿರ್ಣಯ. ಎಲ್ಲ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ. ಕೇಂದ್ರ ಈಗ ಎಲ್ಲರ ಒಪ್ಪಿಗೆ ಪಡೆದು ಕಾಯ್ದೆ ಯಾಗಿ ಜಾರಿಗೆ ತರುತ್ತದೆ ಎನ್ನುವ ವಿಶ್ವಾಸವಿದೆ.ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿರುವುದನ್ನು ಸ್ವಾಗತಿಸುತ್ತೇನೆ. ದೇವೇಗೌಡರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿಯೇ 1996 ಸೆ. 12ರಂದು ರಾಜ್ಯಸಭೆ ಯಲ್ಲಿ ಈ ಐತಿಹಾಸಿಕ ಮಸೂದೆಯನ್ನು ಮಂಡಿಸಲಾಗಿತ್ತು. ಆದರೆ ಅವರ ಸಂಯುಕ್ತ ರಂಗ ಮೈತ್ರಿಕೂಟದ ಕೆಲವು ಮಿತ್ರ ಪಕ್ಷಗಳೇ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಈಗ ಮರುಜೀವ ಪಡೆದಿರುವುದು ಸಂತೋಷ ಉಂಟುಮಾಡಿದೆ.
ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಮಹಿಳಾ ಮೀಸಲಾತಿ ಬಗ್ಗೆ ಪ್ರಧಾನಿ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಮೋದಿಯವರು ಸದಾ ದೇಶದ ಹಿತಾಸಕ್ತಿಯನ್ನು ಗಮನಿಸಿ, ದೂರಗಾಮಿ ಪರಿಣಾಮ ಹೊಂದಿರುವ ಉತ್ತಮ ನಿರ್ಧಾರ ಗಳನ್ನು ಕೈಗೊಳ್ಳುತ್ತಿದ್ದಾರೆ. ಮಹಿಳೆಯರಿಗೆ ಹೆಚ್ಚಿನ ಅಧಿಕಾರ ನೀಡುವಲ್ಲಿ ಈ ಮಸೂದೆ ಯಶ ಕಾಣಲಿದೆ.
ಭಾಗೀರಥಿ ಮುರುಳ್ಯ, ಸುಳ್ಯ ಶಾಸಕಿ ರಾಜಕೀಯ ನಾಯಕರ ಪಕ್ಷಾತೀತ ಸ್ವಾಗತ
ಮಹಿಳೆಯರಿಗೆ ಸಂಸತ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶೇ. 33 ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿರುವುದನ್ನು ರಾಜ್ಯದ ರಾಜಕೀಯ ಪಕ್ಷಗಳ ಮುಖಂಡರು, ಮಹಿಳಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸ್ವಾಗತಿಸಿದ್ದಾರೆ. ಬಿಜೆಪಿ ನಾಯಕರು ಇದೊಂದು ಐತಿಹಾಸಿಕ ತೀರ್ಮಾನ. ಮಹಿಳೆಯರ ಸಶಕ್ತೀಕರಣದ ದೃಷ್ಟಿಯಿಂದ ಇಡಲಾಗಿರುವ ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಜೆಡಿಎಸ್ ಸಹ ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ್ದು, ಎಚ್.ಡಿ. ದೇವೇಗೌಡ ಅವರು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಪ್ರಯತ್ನ ನಡೆಸಿದ್ದರು ಎಂದು ಸ್ಮರಿಸಿದೆ. ಅತ್ತ ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದರೂ ಸಹ ಚುನಾವಣೆ ಸಮೀಪಿಸುತ್ತಿರುವಾಗ ಇಂತಹ ತೀರ್ಮಾನ ಕೈಗೊಳ್ಳುತ್ತಿರುವ ಉದ್ದೇಶದ ಬಗ್ಗೆ ಸಂಶಯ ವ್ಯಕ್ತಪಡಿಸಿದೆ.