Advertisement

ಶಿಡ್ಲಘಟ್ಟ ತಾಲೂಕಿನಲ್ಲಿ ಕೋವಿಡ್ ಸ್ಪೋಟ: ಒಂದೇ ದಿನ 336 ಜನರಿಗೆ ಸೋಂಕು; ನಾಗರಿಕರಲ್ಲಿ ಆತಂಕ

08:35 PM May 01, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ವಿಶೇಷ ನಿಗಾವಹಿಸುತ್ತಿರುವ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ರೇಷ್ಮೆ ನಗರ ಶಿಡ್ಲಘಟ್ಟ ತಾಲೂಕಿನಲ್ಲಿ ಕೋವಿಡ್ ಸ್ಪೋಟಗೊಂಡಿದೆ. ಒಂದೇ ದಿನ 336 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

Advertisement

ಶಿಡ್ಲಘಟ್ಟ ನಗರದಲ್ಲಿ 103 ಸೇರಿದಂತೆ ತಾಲೂಕಿನಾದ್ಯಂತ 336 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಜನರನ್ನು ಚಿಂತೆಗೀಡು ಮಾಡಿದೆ.

ಬೆಂಗಳೂರಿನಿಂದ ಬಂದು ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಪಡೆದುಕೊಂಡಿರುವ ಜನರಿಂದ ಕೋವಿಡ್ ಸೋಂಕು ಹಬ್ಬಿದೆ ಎಂಬ ಅನುಮಾನ ಮೂಡಿದ್ದು ಕೋವಿಡ್ ಕಾರ್ಯಪಡೆಯ ಸದಸ್ಯರು ಈ ಸಂಬಂಧ ಮಾಹಿತಿಯನ್ನು ಕಲೆ ಹಾಕಬೇಕಾಗಿದೆ.

ಶಿಡ್ಲಘಟ್ಟ ತಾಲೂಕಿನಲ್ಲಿ ಸಾಮಾನ್ಯವಾಗಿ ಕೋವಿಡ್ ಸೋಂಕು 100 ರಿಂದ 150 ಗಡಿ ದಾಟುತ್ತಿರಲಿಲ್ಲ. ಆದರೇ ದಿಡೀರ್ ಬೆಳವಣಿಗೆಯಲ್ಲಿ 336 ಜನರಿಗೆ ಕೋವಿಡ್ ಸೋಂಕು ಧೃಡಪಟ್ಟಿದ್ದು, ನಾಗರಿಕರಲ್ಲಿ ಆತಂಕ ಮನೆ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಿದರೂ ಸಹ ಜನ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿಲ್ಲ, ಸಾಮಾಜಿಕ ಅಂತರವಿಲ್ಲ ಹೀಗಾಗಿ ಸೋಂಕು ಹರಡಲು ಕಾರಣವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾರುಕಟ್ಟೆ ಕೋವಿಡ್ ಹಾಟ್‍ಸ್ಪಾಟ್ ಕೇಂದ್ರ?

Advertisement

ಜಿಲ್ಲೆಯಲ್ಲಿ ರೇಷ್ಮೆ ಬೆಳೆಯುವ ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಜನತಾ ಕಫ್ರ್ಯೂಯ ನಡುವೆಯೂ ಶಿಡ್ಲಘಟ್ಟದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡಲು ಅವಕಾಶ ಕಲ್ಪಿಸಲಾಗಿದೆ ಆದರೆ ಮಾರುಕಟ್ಟೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿಲ್ಲವೆಂಬ ದೂರು ಸರ್ವೇ ಸಾಮಾನ್ಯವಾಗಿದೆ. ಸಹಸ್ರಾರು ಜನರು ಭಾಗವಹಿಸುವ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಸಾಧ್ಯವೇ? ಎಂಬ ಪ್ರಶ್ನೆ ಉದ್ಭವವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next