Advertisement
ನಿಯಮ ಉಲ್ಲಂಘಿಸಿ ಸರಕಾರದ ಸಬ್ಸಿಡಿ :
Related Articles
Advertisement
ಐಟಿ ಮತ್ತು ಕಂದಾಯ ಇಲಾಖೆ ನೆರವು :
ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ದಾರರ ಆದಾಯದ ಬಗ್ಗೆ ಮಾಹಿತಿ ಪಡೆಯಲು ಆಹಾರ ಇಲಾಖೆ ಐಟಿ ಮತ್ತು ಕಂದಾಯ ಇಲಾಖೆಯ ನೆರವು ಪಡೆಯುತ್ತಿದೆ. ಆದಾಯ ತೆರಿಗೆ ಇಲಾಖೆ ನೀಡಿದ ಮಾಹಿತಿ ಆಧಾರದಲ್ಲಿ 2,671 ಪಡಿತರ ಚೀಟಿ, 1.20 ಲಕ್ಷ ರೂ.ಗಿಂತ ಹೆಚ್ಚಿನ ಕೌಟುಂಬಿಕ ಆದಾಯ ಹೊಂದಿದ 58 ಕಾರ್ಡ್, ಎಚ್‌ಆರ್‌ಎಂಎಸ್ ಮಾಹಿತಿಯಂತೆ 36 ಕಾರ್ಡ್, ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿರುವ 610 ಕುಟುಂಬಗಳು ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಪತ್ತೆಯಾಗಿದೆ. ಅವುಗಳನ್ನು ಅನರ್ಹಗೊಳಿಸಲಾಗಿದೆ. ಸಾವಿನ ಮಾಹಿತಿ ನೋಂದಣಿಯ ಆಧಾರದ ಮೇಲೆ ಒಟ್ಟು 13,889 ಮೃತರ ಹೆಸರಿದ್ದ ಪಡಿತರ ಚೀಟಿ ರದ್ದುಪಡಿಸಲಾಗಿದೆ. ಆದಾಯ ತೆರಿಗೆ ಪಾವತಿದಾರ ಕುಟುಂಬದ 2,671 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ.
ಯಾರೆಲ್ಲ ಅನರ್ಹರು? :
ಕುಟುಂಬದಲ್ಲಿ ಸರಕಾರಿ ಅಥವಾ ಅರೆ ಸರಕಾರಿ ಉದ್ಯೋಗ ಹೊಂದಿರುವರು, ಆದಾಯ ತೆರಿಗೆ ಪಾವತಿಸುವವರು, ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯ ಇಲ್ಲದೆ ಇರುವವರು, ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು, ಮರಣ ಹೊಂದಿದವರ ಮತ್ತು ಕುಟುಂಬದಲ್ಲಿ ವಾಸ್ತವ್ಯವಿಲ್ಲದೆ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೆ ಉಳಿಸಿಕೊಂಡವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಭೂಮಿ ಹಾಗೂ ನಗರ ಪ್ರದೇಶದ 1,000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವವರು, ಸ್ವಂತ ಉಪಯೋಗಕ್ಕಾಗಿ ಕಾರು, ಲಾರಿ, ಜೆಸಿಬಿ ಇತ್ಯಾದಿ ವಾಹನ ಹೊಂದಿರುವವರು.
ಜಿಲ್ಲೆಯಲ್ಲಿ ರದ್ದುಗೊಂಡ ಬಿಪಿಎಲ್, ಅಂತ್ಯೋದಯ ಕಾರ್ಡ್ ವಿವರ :
ತಾಲೂಕು 4 ಚಕ್ರ ವಾಹನ ಆದಾಯ ತೆರಿಗೆ1.20 ಲ.ರೂ. ವಾ. ಆದಾಯ
ಉಡುಪಿ 78 381 18
ಬ್ರಹ್ಮಾವರ 25 539 0
ಕುಂದಾಪುರ 240 765 0
ಬೈಂದೂರು 88 404 0
ಕಾರ್ಕಳ 126 258 38
ಕಾಪು 45 233 0
ಹೆಬ್ರಿ 1 91 2
ಒಟ್ಟು 610 2,671 58
ಮಕ್ಕಳ ಆದಾಯ ಕುತ್ತು :
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಮಕ್ಕಳು ಉನ್ನತ ಶಿಕ್ಷಣ ಪಡೆದು ಉದ್ಯೋಗಸ್ಥರಾದ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಪಡಿತರ ಚೀಟಿಯನ್ನು ಬದಲಾಯಿಸಬೇಕು. ಹೆಚ್ಚಿನವರಿಗೆ ಈ ಬಗ್ಗೆ ಮಾಹಿತಿ ಇಲ್ಲದ ಕಾರಣ ಆದಾಯ ತೆರಿಗೆ ಇಲಾಖೆ ಮಾಹಿತಿ ಪ್ರಕಾರ ಬಿಪಿಎಲ್ ಕಾರ್ಡ್‌ಗಳನ್ನು ಆಹಾರ ಇಲಾಖೆ ಸ್ವಯಂಪ್ರೇರಿತವಾಗಿ ಎಪಿಎಲ್‌ಗೆ ಬದಲಾಯಿಸುತ್ತದೆ. ಅನೇಕ ಜಿಲ್ಲೆಗಳಲ್ಲಿ ಮಗಳನ್ನು ಮದುವೆ ಮಾಡಿಕೊಟ್ಟ ಬಳಿಕವೂ ತವರು ಮನೆಯ ಪಡಿತರ ಚೀಟಿಯಲ್ಲಿ ಹೆಸರು ಉಳಿಸಿಕೊಳ್ಳಲಾಗಿದೆ. ಮಗಳು ಅಳಿಯ ಜಂಟಿಯಾಗಿ ಯಾವುದೇ ಆಸ್ತಿ ಖರೀದಿಸಿದರೂ ಆಧಾರ್ ಕಾರ್ಡ್ ಆಧಾರದಲ್ಲಿ ತವರು ಮನೆಯ ಬಿಪಿಎಲ್ ಕಾರ್ಡ್ ರದ್ದಾಗುತ್ತಿದೆ.
ವಾರ್ಷಿಕ ಆದಾಯ 1.20 ಲ.ರೂ. ಹೆಚ್ಚಿದ್ದರೆ ಅಂಥವರು ಬಿಪಿಎಲ್ ಕಾರ್ಡ್ ಸರೆಂಡರ್ ಮಾಡಬೇಕು. ನಿಗದಿತ ಸಂಬಳ ಪಡೆಯುವ ಖಾಸಗಿ ನೌಕರರಿಗೂ ಅನ್ವಯವಾಗುತ್ತದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಲ್ಲಿ 3,474 ಅನರ್ಹ ಪಡಿತರ ಚೀಟಿಯನ್ನು ರದ್ದು ಪಡಿಸಲಾಗಿದೆ. 13,889 ಮಂದಿ ಮೃತ ಸದಸ್ಯರ ಹೆಸರು ಕಾರ್ಡ್‌ನಿಂದ ತೆಗೆಯಲಾಗಿದೆ. –ಮಹಮ್ಮದ್ ಇಸಾಕ್‌ಉಪನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉಡುಪಿ
-ತೃಪ್ತಿ ಕುಮ್ರಗೋಡು