Advertisement

ಜು.6ರಂದು ಡಾ.ಬಾಬು ಜಗಜೀವನ್ ರಾಂ 34ನೇ ಪುಣ್ಯಸ್ಮರಣೆ, ಸರಳ ಕಾರ್ಯಕ್ರಮ: ಗೋವಿಂದ ಕಾರಜೋಳ

01:28 PM Jul 02, 2020 | Mithun PG |

ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ್ ರಾಂ ರವರ 34ನೇ  ಪುಣ್ಯ ಸ್ಮರಣೆ ಕಾರ್ಯಕ್ರಮ ಜುಲೈ 6 ರಂದು ನಡೆಯಲಿದೆ.

Advertisement

ಬೆಳಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, , ವಿಧಾನ ಸೌಧದ ಪಶ್ಚಿಮ ದ್ವಾರದ ಬಳಿ ಇರುವ ಡಾ. ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಗೌರವ ಸಮರ್ಪಿಸಲಿದ್ದಾರೆ.

ಈಗಾಗಲೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಾಣುಗಳನ್ನು  ನಿಯಂತ್ರಣಗೊಳಿಸಲು  ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತುಂಬಾ ಸರಳವಾಗಿ, ಹೆಚ್ಚಿನ ಜನಸಂದಣಿ ಸೇರದೇ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಚರಿಬೇಕಾಗಿದೆ.

ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು, ಅನುಯಾಯಿಗಳು ಸಹಕರಿಸಬೇಕು. ಈ ಮನವಿಯನ್ನು ಸ್ವಯಂ ಪ್ರೇರಣೆಯಿಂದ ಅನುಸರಿಸಬೇಕು ಎಂದು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next