ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿಯೇ ಸಾಗಿದ್ದು, ಇಂದು ಕೂಡ 30 ಸಾವಿರ ಗಡಿ ದಾಡಿದೆ.
ಇಂದು ( ಗುರುವಾರ) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ:28.04.2021, 00:00 ರಿಂದ 23:59 ) ಅವಧಿಯಲ್ಲಿ ಬರೋಬ್ಬರಿ 35024 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 349496ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ 270 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ವರದಿಗಳು ತಿಳಿಸಿರುವಂತೆ ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾಗಿ 14142 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2431 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಳಿಕೆ :
ಕಳೆದ ಕೆಲ ದಿನಗಳ ಅಂಕಿ-ಅಂಶಗಳನ್ನು ಗಮನಿಸಿದರೆ ಇಂದು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ 19637 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೇ ಅವಧಿಯಲ್ಲಿ 143 ಜನರು ಸಾವನ್ನಪ್ಪಿದ್ದಾರೆ.