Advertisement

357 ಸರ್ಕಾರಿ ವೈದ್ಯರ ನೇಮಕ ಆರಂಭ

06:00 AM Jul 02, 2018 | |

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಖಾಲಿ ಇದ್ದು ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 357 ವೈದ್ಯರ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಇದರಿಂದ ರೋಗಿಗಳ ಚಿಕಿತ್ಸೆಗೆ ಅಡಚಣೆಯಾಗಿದೆ. ಹೀಗಾಗಿ, ಸರ್ಕಾರಿ ವೈದ್ಯರ
ನೇಮಕಾತಿಗೆ ಚಾಲನೆ ನೀಡಲಾಗಿದ್ದು, ರಾಜ್ಯದ ನಾಲ್ಕು ಪ್ರಾದೇಶಿಕ ವಲಯವಾರು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಯಾ ವಲಯವಾರು ಕಾರ್ಯ ನಿರ್ವಹಿಸಲು ಸಿದ್ಧರಿರುವ ವೈದ್ಯರನ್ನು ನಿಯಮಾನುಸಾರ ನೇಮಕ ಮಾಡಲಾಗುವುದು. ಸರ್ಕಾರಿ ವೈದ್ಯರು, ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಅವಧಿ ಹೊರತುಪಡಿಸಿ ಉಳಿದ ಸಮಯದಲ್ಲಿ ತಮ್ಮ ಖಾಸಗಿ ಆಸ್ಪತ್ರೆ ನಡೆಸಲು ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next