Advertisement

ಮೇಲ್ಮನೆ ಚುನಾವಣೆಗೆ 3,590 ಮತದಾರರು

12:34 PM Nov 11, 2021 | Team Udayavani |

ಹಾಸನ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಡಿ.10ರಂದು ನಡೆಯಲಿರುವ ಚುನಾವಣೆಗೆ 3,590 ಮಂದಿ ಅರ್ಹ ಮತದಾರರ ಪಟ್ಟಿ ಸಿದ್ಧವಾಗಿದೆ. ಅತಿ ಹೆಚ್ಚಿನ ಮತದಾರರು ಗ್ರಾಮ ಪಂಚಾಯತಿ ಸದಸ್ಯರಾಗಿದ್ದು, ಅವರ ಸಂಖ್ಯೆ 3,385. ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಮತದಾರರು 196 ಇದ್ದರೆ, 7 ಮಂದಿ ಶಾಸಕರು, ಒಬ್ಬ ಸಂಸದರು, ಒಬ್ಬ ವಿಧಾನ ಪರಿಷತ್‌ ಸದಸ್ಯರು ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Advertisement

ಕಚೇರಿಗಳಲ್ಲಿ ಮತಗಟ್ಟೆ ವ್ಯವಸ್ಥೆ: 3,590 ಮಂದಿ ಮತ ಚಲಾಯಿಸಲು 257 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗುತ್ತಿದ್ದು, ಗ್ರಾಮ ಪಂಚಾಯತಿ ಕಚೇರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಕಚೇರಿಗಳಲ್ಲಿ ಮತಗಟ್ಟೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಚುನಾವಣಾ ಅಧಿಸೂಚನೆ ನ.16ರಂದು ಹೊರ ಬೀಳಲಿದ್ದು, ಅಂದಿನಿಂದಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ:- ಮಕ್ಕಳ ಉದ್ಯಾನವನಕ್ಕೆ ದಿ.ನಟ ಪುನೀತ್‌ ಹೆಸರಿಡಿ

ನ.23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.26 ನಾಮಪತ್ರ ವಾಪಸ್ಸಾತಿಗೆ ಕೊನೆಯ ದಿನವಾಗಿರುತ್ತದೆ. ಡಿ.10ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 4 ಗಂಟೆವರೆಗೂ ಮತದಾನ ನಡೆಯಲಿದ್ದು, ಮತಗಳ ಎಣಿಕೆ ಡಿ.14ರಂದು ನಡೆಯಲಿದೆ ಎಂದು ಹೇಳಿದರು.

ನೀತಿ ಸಂಹಿತೆ ಜಾರಿ: ಚುನಾವಣಾ ವೇಳಾಪಟ್ಟಿ ಪ್ರಕಟವಾದ ನ.9ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಡಿ.16ರವರೆಗೂ ಜಾರಿಯಲ್ಲಿರಲಿದೆ. ಆ ಸಮಯದಲ್ಲಿ ಶಾಸಕರು, ಸಂಸದರು ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವಂತಿಲ್ಲ. ಆದರೆ, ಪ್ರಾಕೃತಿಕ ವಿಕೋಪ ಪರಿಹಾರ ಸಂಬಂಧಿ ಸಭೆಗಳನ್ನು ನಡೆಸಲು ಅವಕಾಶವಿದೆ. ಆ ಸಭೆಯಲ್ಲಿ ಮತದಾರರ ಸೆಳೆಯುವಂತಹ ಹೇಳಿಕೆ, ಘೋಷಣೆ ಮಾಡುವಂತಿಲ್ಲ.

Advertisement

ಸಭೆಯ ವೀಡಿಯೋ ಮಾಡಿ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಣ್ಗಾವಲಿಗೆ ಸಂಚಾರಿ ಜಾಗೃತ ದಳ, ಜಿಲ್ಲೆಯ ಗಡಿಭಾಗಳಲ್ಲಿ ವಿಚಕ್ಷಣಾ ದಳಗಳನ್ನು ನೇಮಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಮುಖ್ಯಾಧಿಕಾರಿ ಬಿ.ಎನ್‌.ನಂದಿನಿ ಮಾತನಾಡಿ, ಮತಗಟ್ಟೆಗಳನ್ನು ಪರಿವೀಕ್ಷಣೆ ನಡೆಸಿದ ನಂತರ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಬಂದೋಬಸ್ತ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

 ಜಿಲ್ಲೆಯಲ್ಲಿ ಪದವೀಧರರ ನೋಂದಣಿಗೆ ಹಿನ್ನಡೆ

ಹಾಸನ: ವಿಧಾನ ಪರಿಷತ್ತಿಗೆ ಮುಂದಿನ ವರ್ಷ ಮೇ- ಜೂನ್‌ನಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರ ನೋಂದಣಿಯಲ್ಲಿ ಈ ಬಾರಿ ಹಿನ್ನಡೆ ಉಂಟಾಗಿದೆ. ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ ಸುಮಾರು 23 ಸಾವಿರ ಪದವೀಧರರು ಮತದಾರರು ನೋಂದಾಯಿಸಿಕೊಂಡಿದ್ದರು. ಆದರೆ, ಈ ಬಾರಿ 20 ಸಾವಿರ ಮಂದಿ ಮಾತ್ರ ನೋಂದಣಿ ಮಾಡಿಸಿಕೊಂಡಿ ದ್ದಾರೆ. ಪದವೀಧರರ ನೋಂದಣಿ ಅವಧಿ ನ.6ಕ್ಕೆ ಮುಕ್ತಾಯವಾಗಿದೆ. ಆದರೆ, ಅರ್ಜಿಗಳ ಪರಿಶೀಲನೆ ನಡೆಯುತ್ತಿರುವುದರಿಂದ ಈಗಲೂ ಪದವೀಧರರು ತಮ್ಮ ಹೆಸರು ನೋಂದಣಿಗೆ ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next