Advertisement
“ಸಾಮಾನ್ಯ ಮಳೆಗಾಲದ ಅವಧಿಯಲ್ಲಿ ಈ ಪ್ರಮಾಣದ ನೀರು ಬಿಡಬೇಕೆಂಬುದು ವಾಡಿಕೆಯಾಗಿದೆ. ಆದರೆ ಈ ಬಾರಿ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗಿಲ್ಲ. ಈ ವರ್ಷ ರಾಜ್ಯವು ಮಳೆನೀರಿನ ಕೊರತೆ ಅನುಭವಿಸುತ್ತಿದೆ’ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖೀಸಲಾಗಿದೆ.
ವಿವಾದದ ಹಿಂದೆ ಡಿ.ಕೆ.ಶಿವಕುಮಾರ್: ಇದೇ ವೇಳೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾತನಾಡಿ, “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾವೇರಿ ವಿವಾದ ಮುನ್ನೆಲೆಗೆ ಬಂದಿದೆ. ಮೇಕೆದಾಟು ಜಲಾಶಯ ನಿರ್ಮಾಣವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ. ರಾಜಕೀಯ ಲಾಭಕ್ಕಾಗಿ ಕಾವೇರಿ ನದಿ ವಿವಾದ ಮಾಡಲಾಗುತ್ತಿದೆ. ಇದರ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾರೆ’ ಎಂದು ಆರೋಪಿಸಿದ್ದಾರೆ.