ಮುಂಬಯಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಭೂಕುಸಿತದಲ್ಲಿ 36 ಮಂದಿ ಸಾವನ್ನಪ್ಪಿರುವ ಘಟನೆ ರಾಯಗಢದಲ್ಲಿ ನಡೆದಿದೆ. ಭಾರೀ ಮಳೆ, ಪ್ರವಾಹದಿಂದ ಸಾವಿರಾರು ಮಂದಿ ಸಂಚಾರವಿಲ್ಲದೆ ಪರದಾಡುವಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪೆಗಾಸಸ್ ನನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡಿದೆ,ಇದು ನಿಜವಾದ ದೇಶದ್ರೋಹ : ರಾಹುಲ್ ಗುಡುಗು
ವಾಣಿಜ್ಯ ನಗರಿ ಮುಂಬಯಿಂದ 70 ಕಿಲೋ ಮೀಟರ್ ದೂರದಲ್ಲಿರುವ ರಾಯಗಢ ಪ್ರದೇಶ ಪ್ರವಾಹಪೀಡಿತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಹೆಲಿಕಾಪ್ಟರ್ ಬಳಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿರುವ ಜನರು ಮನೆಯ ಮಹಡಿ ಮೇಲೆ ಅಥವಾ ಎತ್ತರದ ಪ್ರದೇಶದಲ್ಲಿ ಕುಳಿತುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಕಳೆದ 40 ವರ್ಷಗಳಲ್ಲಿಯೇ ಕಂಡುಕೇಳರಿಯದ ಭಾರೀ ಮಳೆಗೆ ಸಾಕ್ಷಿಯಾಗಿದೆ. ನಿನ್ನೆ ಸಂಭವಿಸಿದ ಭೂ ಕುಸಿತದಲ್ಲಿ 32 ಮಂದಿ ಸಾವನ್ನಪ್ಪಿದ್ದು, ಮತ್ತೊಂದು ಪ್ರದೇಶದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ನಾಲ್ವರು ಸಾವನ್ನಪ್ಪಿದ್ದರು ಎಂದು ವರದಿ ತಿಳಿಸಿದೆ.