Advertisement

ಬೀದರ್: 36 ಹೊಸ ಸೋಂಕು ಪ್ರಕರಣ ದಾಖಲು ; 3 ಸಾವು

08:01 PM Sep 04, 2020 | Hari Prasad |

ಬೀದರ್: ಹೆಮ್ಮಾರಿ ಕೋವಿಡ್ 19 ಸೋಂಕಿನಿಂದ ಶುಕ್ರವಾರ ಗಡಿ ಜಿಲ್ಲೆ ಬೀದರನಲ್ಲಿ ಮೂವರು ಬಲಿಯಾಗಿದ್ದಾರೆ.

Advertisement

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟರ ಸಂಖ್ಯೆ 139ಕ್ಕೆ ಏರಿಕೆ ಆಗಿದೆ.

ಇನ್ನೊಂದೆಡೆ ಜಿಲ್ಲೆಯಲ್ಲಿ ಇಂದೂ ಒಂದೇ ದಿನ 36 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೀದರ ನರದ ವಿದ್ಯಾನಗರ ಕಾಲೋನಿಯ 67 ವರ್ಷದ ವ್ಯಕ್ತಿ, ಮೈಲೂರಿನ 92 ವರ್ಷದ ವ್ಯಕ್ತಿ ಮತ್ತು ತಾಲೂಕಿನ ಸುಲ್ತಾನಪೂರ ಗ್ರಾಮದ 55 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಕೆಮ್ಮು ಲಕ್ಷಣ ಹಿನ್ನಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Advertisement

ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 4757ಕ್ಕೆ ತಲುಪಿದೆ. ಇಂದು 35 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಈವರೆಗೆ 4156 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 458 ಸೋಂಕಿತರು ಬ್ರಿಮ್ಸ್, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಶಾಸಕರಿಗೆ ಸೋಂಕು: ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕಿನಿಂದ ಭಯ ಪಡುವ ಅಗತ್ಯವಿಲ್ಲ ಎಂದು ಖಂಡ್ರೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next