ಬೀಜಿಂಗ್ : ಮಧ್ಯ ಚೀನಾದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಸುಮಾರು ಮೂವತ್ತಾರು ಮಂದಿ ಸಾವನ್ನಪ್ಪಿದ್ದು ಹಾಗೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ಮಂಗಳವಾರ ತಿಳಿಸಿದೆ.
“ಸೋಮವಾರ ಸಂಜೆ ಸುಮಾರು ನಾಲ್ಕು ಗಂಟೆಯ ಸುಮಾರಿಗೆ ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ಅನ್ಯಾಂಗ್ ನಗರದಲ್ಲಿರುವ ಕೈಗಾರಿಕಾ ಸ್ಥಾವರದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದಾವಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದು ರಾತ್ರಿಯವರೆಗೂ ಬೆಂಕಿ ನಂದಿಸುವ ನಡೆದಿದೆ ಎನ್ನಲಾಗಿದೆ.
ರಕ್ಷಣಾ ತಂಡದಿಂದ ನಾಪತ್ತೆಯಾಗಿರುವ ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ
ಇದನ್ನೂ ಓದಿ: ಕೊಲಂಬಿಯಾದ ವಸತಿ ಪ್ರದೇಶದ ಮೇಲೆ ಲಘು ವಿಮಾನ ಪತನ, 8 ಸಾವು