Advertisement
ಕೊರಟಗೆರೆ ಕ್ಷೇತ್ರ ವಿಧಾನ ಸಭಾ ವ್ಯಾಪ್ತಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿ, ಬಡವರಿಗಾಗಿಯೇ ಕಾಂಗ್ರೆಸ್ ಸರ್ಕಾರ ಬಡವರಿಗೆ ಶಾಶ್ವತ ಸೂರು ಕಟ್ಟಿಕೊಳ್ಳಲು ಮನೆಗಳನ್ನು ಮಂಜೂರು ಮಾಡಿದೆ. ಮನೆಯಿಲ್ಲದ ಕಡು ಬಡವರನ್ನು ಗುರುತಿಸಿ ಅವರಿಗೆ ಮನೆಗಳನ್ನು ನೀಡುವ ಕಾರ್ಯವಾಗಬೇಕು, ಗ್ರಾಮ ಪಂಚಾಯತಿ ಅಧ್ಯಕ್ಷರು ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯತಿಗೆ ಮಂಜೂರಾಗಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು, ಉಳ್ಳವರಿಗೆ ಮತ್ತು ಶಿಫಾರಸು ಮಾಡುವವರಿಗೆ ಮನೆ ನೀಡಿ ಇಲ್ಲದವರಿಗೆ ಮೋಸ ಮಾಡುವ ಕಾರ್ಯವಾಗಬಾರದು ಎಂದು ಹೇಳಿದರು.
Related Articles
Advertisement
ಗ್ರಾಪಂ ಅಧ್ಯಕ್ಷ ಅಶ್ವತ್ಥನಾರಾಯಣ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿಗೆ ಮಂಜೂರಾಗಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುತ್ತೇವೆ, ಎಲ್ಲಾ ಸದಸ್ಯರೊಂದಿಗೆ ಪ್ರತಿ ವಾರ್ಡ್‌ಗೆ ತೆರಳಿ ಮನೆ ಇಲ್ಲದವರನ್ನು ಗುರುತಿಸಿ ಅರ್ಹರಿಗೆ ಮನೆ ನಿಡಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಲಕ್ಷ್ಮೀನರಸೇಗೌಡ, ಗ್ರಾಪಂ ಉಪಾಧ್ಯಕ್ಷ ಮಂಜುಳಾ, ಎಪಿಎಂಸಿ ಅಧ್ಯಕ್ಷ ಗಂಗಾಧರಯ್ಯ, ತಾಪಂ ಇಒ ಡಾ.ಕೆ.ನಾಗಣ್ಣ, ಕಾಂಗ್ರೆಸ್ ಮುಖಂಡ ಯದುನಂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.