Advertisement

371 J ಜಾರಿಗೆ ಪ್ರತ್ಯೇಕ ಇಲಾಖೆ: ಸಿದ್ದರಾಮಯ್ಯ ಘೋಷಣೆ

12:04 AM Sep 18, 2023 | Team Udayavani |

ಕಲಬುರಗಿ: ಪ್ರತ್ಯೇಕ ಸಚಿವಾಲಯ ರಚಿಸುವ ಮೂಲಕ 371ನೇ ಜೆ ಕಲಂ ಪರಿಣಾಮಕಾರಿ ಜಾರಿಗೆ  ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಆಗಮಿಸಿದ್ದ ಸಿದ್ದರಾಮಯ್ಯ ಅವರು ಧ್ವಜಾರೋಹಣ ನಡೆಸಿ, ಸರ್ದಾರ್‌ ವಲ್ಲಭಭಾಯ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ಕುರಿತು ಸಭೆ ಮಾಡಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸಲು ಪ್ರತ್ಯೇಕ ಎಂಜಿನಿಯರಿಂಗ್‌ ವಿಭಾಗ ರಚಿಸಲು ಈಗಾಗಲೇ ಕಳುಹಿಸಿರುವ ಪ್ರಸ್ತಾವನೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರವನ್ನು ಬಲಗೊಳಿಸುವ ನಿಟ್ಟಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು. ಈಗಾಗಲೇ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಸೂಚಿಸಲಾಗಿದೆ. ಈ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ಬರಗಾಲ ಕುರಿತು ಕೇಂದ್ರಕ್ಕೆ ಪತ್ರ ಬರೆದು ನೆರವಿಗೆ ಕೋರಲಾಗಿದೆ. ಆದರೆ ಪ್ರಧಾನಿಯವರಿಂದ ಯಾವುದೇ ಉತ್ತರ ಬಂದಿಲ್ಲ. ಈ ನಿಟ್ಟಿನಲ್ಲಿ ಸರ್ವಪಕ್ಷಗಳ ಸಭೆ ನಡೆಸಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next