ಬಾಗಲಕೋಟೆ: ಜಿಲ್ಲೆಯಿಂದ ಕಳುಹಿಸಲಾಗಿದ್ದ ಒಟ್ಟು 1033 ಸ್ಯಾಂಪಲ್‌ಗಳ ಪೈಕಿ 373 ಸ್ಯಾಂಪಲ್‌ಗಳ ವರದಿ ನೆಗೆಟಿವ್ ಬಂದಿದ್ದು, ಶನಿವಾರ ಹೊಸದಾಗಿ ಕಳುಹಿಸಿದ 379 ಹಾಗೂ ಬಾಕಿ ಸೇರಿ ಒಟ್ಟು 1039 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಿಂದ ಮತ್ತೆ ಹೊಸದಾಗಿ 379 ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಬಾಕಿ 660 ಹಾಗೂ ಹೊಸದಾಗಿ ತೆಗೆಯಲಾದ 379 ಸ್ಯಾಂಪಲ್ ಸೇರಿ ಒಟ್ಟಾರೆಯಾಗಿ 1039 ಸ್ಯಾಂಪಲ್‌ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಇಲ್ಲಿಯವರೆಗೆ 169 ಸ್ಯಾಂಪಲ್ ಪರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಪ್ರತ್ಯೇಕವಾಗಿ 1899 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 8008 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 6857 ನೆಗೆಟಿವ್ ಪ್ರಕರಣ, 77 ಪಾಸಿಟಿವ್ ಪ್ರಕರಣ ಹಾಗೂ ಓರ್ವ ವೃದ್ಧ ಮೃತಪಟ್ಟಿದ್ದಾರೆ. ಕೋವಿಡ್-19 ದಿಂದ ಒಟ್ಟು 66 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 10 ಜನ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇನ್ನು 3 ಕಂಟೇನ್ಮೆಂಟ್ ಝೋನ್‌ಗಳಿವೆ. ಇಲ್ಲಿವರೆಗೆ ಒಟ್ಟು 13 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. 14 ದಿನಗಳ ಕಾಲ ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 1151 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 9 ಚೆಕ್‌ಪೋಸ್ಟ್‌ಗಳ ಪೈಕಿ ಸದ್ಯ 3 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಚೆಕ್‌ಪೋಸ್ಟ್ ಗಳ ಮೂಲಕ 5,5154 ವಾಹನಗಳ ತಪಾಸಣೆ ಮಾಡಿದ್ದು, 2,13,131 ಜನರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.