Advertisement

3800 ಉಪನ್ಯಾಸಕರ ನೇಮಕ: ಜಿ.ಟಿ.ದೇವೇಗೌಡ

06:24 AM Jun 04, 2019 | Team Udayavani |

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯ ಅನುಮತಿ ಕೋರಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು

Advertisement

ಸಂಸ್ಕೃತ ವಿವಿಯ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 396 ಪ್ರಾಂಶುಪಾಲರ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ.

ಆದಷ್ಟು ಬೇಗ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ. ಹಾಗೆಯೇ ಖಾಲಿ ಇರುವ 3,800 ಉಪನ್ಯಾಸಕರ ಭರ್ತಿಗೂ ಅನುಮತಿ ಕೋರಿದ್ದೇವೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕ ನಂತರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದರು.

ಈ ವರ್ಷ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲಿದ್ದೇವೆ. ಬೋಧಕೇತರ ಸಿಬ್ಬಂದಿ ನೇಮಕದ ಪ್ರಸ್ತಾವನೆ ಇನ್ನೂ ಆರ್ಥಿಕ ಇಲಾಖೆಗೆ ಕಳುಹಿಸಿಲ್ಲ. ಸದ್ಯ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದೇವೆ ಎಂದು ಹೇಳಿದರು.

ಬೆಂಗಳೂರು ವಿವಿ ತ್ರಿಭಜನೆಯ ನಂತರ ಸರ್ಕಾರದಿಂದ ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಉತ್ತರ ವಿವಿಗೆ ಅನುದಾನ ಹೋಗಿಲ್ಲ. ವಿಶ್ವವಿದ್ಯಾಲಯ ತ್ರಿಭಜನೆಯಾದ ಸಂದರ್ಭದಲ್ಲಿ ಅನುದಾನ ಹಂಚಿಕೆಗೆ ಅವಕಾಶ ಮಾಡಿಕೊಡಬೇಕಿತ್ತು,

Advertisement

ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಅನುದಾನ ಹಂಚಿಕೆಗೆ ಬೇಕಾದ ಅವಕಾಶವನ್ನು ಆರ್ಥಿಕ ಇಲಾಖೆ ಮೂಲಕ ಪಡೆದಿದ್ದೇವೆ. ರೂಸಾ ಅನುದಾನದಲ್ಲಿ ವಿವಿಗಳಿಗೆ ಹಣ ಒದಗಿಸುತ್ತೇವೆ ಎಂದು ಹೇಳಿದರು.

ಲ್ಯಾಪ್‌ಟಾಪ್‌ ನೀಡುತ್ತೇವೆ: ಪದವಿ ವಿದ್ಯಾರ್ಥಿಗಳಿಗೆ ನೀಡಬೇಕಿರುವ ಲ್ಯಾಪ್‌ಟಾಪ್‌ ಸಿಂಗಲ್‌ ಟೆಂಡರ್‌ ಸೇರಿ ಹಲವು ತಾಂತ್ರಿಕ ಕಾರಣಗಳಿಂದಾಗಿ ಹಂಚಿಕೆ ಮಾಡಲು ಸಾಧ್ಯವಿಲ್ಲ. ಹೊಸದಾಗಿ ಟೆಂಡರ್‌ ಪ್ರಕ್ರಿಯೆ ನಡೆಸಿ, ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಸಂಬಂಧ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಿದ್ದೇವೆ ಎಂದು ಸಚಿವರು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next