Advertisement
ಬುಧವಾರ ಎಡಿಎ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಮಹಿಳಾ ಉದ್ಯಮಿಗಳ ಸಂಘದ (ಅವೇಕ್) 38ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಿಳಾ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ನಿರಾಣಿ ಅವರು, ರಾಜ್ಯದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.
Related Articles
Advertisement
ನಮ್ಮ ಸರ್ಕಾರ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಕೌಶಲ್ಯ ತರಬೇತಿ ಕಾರ್ಯಕ್ರಮ, ದೇವದಾಸಿಯರ ಪುನರ್ವಸತಿ ಕಾರ್ಯಕ್ರಮ, ದೇವದಾಸಿ ಪಿಂಚಣಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ, ತೃತೀಯ ಲಿಂಗಿಗಳ ಪುನರ್ವಸತಿ ಯೋಜನೆ, ಮಹಿಳಾ ಉದ್ಯಮಿಗಳಿಗೆ ಬಡ್ಡಿ ಸಹಾಯಧನ ಯೋಜನೆ, ಸಮೃದ್ಧಿ ಯೋಜನೆಗಳಂತಹ ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು,ಇದು ಮಹಿಳೆಯರ ಉನ್ನತಿಗಾಗಿ ಮಾರುಕಟ್ಟೆ ನೆರವು ಒದಗಿಸುತ್ತೇದೆ ಎಂದರು.
ಮೈಸೂರು, ಧಾರವಾಡ, ಕಲಬುರಗಿ ಮತ್ತು ಹಾರೋಹಳ್ಳಿಯಲ್ಲಿ ಮಹಿಳೆಯರಿಗೆ ಮೀಸಲಾದ ವಿಶೇಷ ಕೈಗಾರಿಕಾ ಪಾರ್ಕ್ ಅನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ಉದ್ಯಮಶೀಲತೆಯ ಅವಕಾಶಗಳನ್ನು ಅನ್ವೇಷಿಸಿ, ಉದ್ಯೋಗದಾತರಾಗಲು ಮತ್ತು ರಾಜ್ಯದಲ್ಲಿ ಉದ್ಯೋಗವನ್ನು ಸೃಷ್ಟಿಸಲು ಮಹಿಳೆಯರು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕೆಂದು ಸಚಿವ ನಿರಾಣಿ ಅವರು, ಮನವಿ ಮಾಡಿದರು.
ಕೈಗಾರಿಕೆಗಳಲ್ಲಿ ಕರ್ನಾಟಕವನ್ನು ಅಗ್ರಸ್ಥಾನದಲ್ಲಿ ಇರಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ.ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಯುವಜನರು ಯಶಸ್ವಿ ಉದ್ಯಮಿಗಳಾಗಲು ವೇದಿಕೆಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಉದ್ಯೋಗಾಕಾಂಕ್ಷಿಗಳ ಬದಲಿಗೆ ಉದ್ಯೋಗ ಒದಗಿಸುವವರಾಗಿರಬೇಕೆಂದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಇತ್ತೀಚಿಗೆ ನಡೆದ ‘ಉದ್ಯಮಿಯಾಗು, ಉದ್ಯೋಗ ನೀಡು’ (ಉದ್ಯಮಿಯಾಗಿ ಉದ್ಯೋಗದಾತರಾಗಿ) ಕಾರ್ಯಕ್ರಮವು ವೃತ್ತಿಪರ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ಯಮಶೀಲತೆ ಮತ್ತು ಉದ್ಯೋಗ ಸೃಷ್ಟಿಗೆ ಆಕರ್ಷಿಸುವ ಗುರಿಯನ್ನು ಹೊಂದಿದೆ. ನೀವು ಉದ್ಯೋಗದಾತರಾಗಿ, ಜನಸಾಮಾನ್ಯರಿಗೆ ಉದ್ಯೋಗವನ್ನು ನೀಡುವಂತಹ ಉದ್ಯಮಿಗಳಾಗಬೇಕು ಎಂದು ಆಶಿಸಿದರು.
ಕರ್ನಾಟಕ ಸರ್ಕಾರವು ಮುಂದಿನ ವರ್ಷ ನವೆಂಬರ್ 2 ರಿಂದ 4 ರ ವರೆಗೆ ಜಾಗತಿಕ ಹೂಡಿಕೆದಾರರ ಸಭೆಯ ಮುಂದಿನ ಆವೃತ್ತಿಯನ್ನು ಆಯೋಜಿಸುತ್ತಿದ್ದು, ವಿಶೇಷವಾಗಿ ಮಹಿಳಾ ಉದ್ಯಮಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದೆ ಬರುವಂತೆ ಮನವಿ ಮಾಡಿದರು.