Advertisement
ಸಿಲಿಕಾನ್ ಸಿಟಿಯು ಬೆಂದ ಕಾಳೂರಾಗಿ ಮಾರ್ಪಟ್ಟಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ದಲ್ಲಿ 39.2 ಡಿಗ್ರಿ ಸೆಲ್ಸಿಯಸ್ ದಾಖಲೆಯ ಗರಿಷ್ಠ ತಾಪಮಾನ ದಾಖಲಾಗಿದೆ.
ಉದ್ಯಾನನಗರಿಯಲ್ಲಿ ಕಂಡು ಕೇಳರಿಯದ, ಬಿಸಿಯ ಬೇಗೆಯನ್ನು ಇಲ್ಲಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಅನುಭವಿಸುತ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ನೆಲೆಸಿರುವ ಕೆಲವರು ತಿಳಿಸಿದ್ದಾರೆ. ಇನ್ನು ಬೆಂಗಳೂರು ವರ್ಷದಿಂದ ವರ್ಷಕ್ಕೆ ವಿಸ್ತರಿಸಿಕೊಂಡು ಹೋಗುತ್ತಿದ್ದು, 1.10 ಕೋಟಿಗೂ ಹೆಚ್ಚಿನ ವಾಹನಗಳಿವೆ. ಕಾಡು ಕಡಿಮೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಪರಿಸರ ತಜ್ಞರು ತಿಳಿಸಿದ್ದಾರೆ.
Related Articles
Advertisement