Advertisement
ಒಟ್ಟಾರೆಯಾಗಿ ಇಂದು ವಿವಿಧ ಜಿಲ್ಲೆಗಳಲ್ಲಿ ಒಟ್ಟು 397 ಕೋವಿಡ್ 19 ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ.
Related Articles
Advertisement
3799 ಕೋವಿಡ್ ಸೋಂಕಿತರು ರಾಜ್ಯದ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 112 ಜನ ಸೋಂಕಿತರು ಐ.ಸಿ.ಯು.ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಮಂಗಳವಾರದಂತೆ ಇಂದೂ ಸಹ ರಾಜಧಾನಿ ಬೆಂಗಳೂರಿನಲ್ಲೇ ಅತೀ ಹೆಚ್ಚಿನ ಅಂದರೆ 173 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ ಬಳ್ಳಾರಿ (34), ಕಲಬುರಗಿ (22), ರಾಮನಗರ (22), ಉಡುಪಿ (14), ಯಾದಗಿರಿ (13), ದಕ್ಷಿಣ ಕನ್ನಡ (12), ಧಾರವಾಡ (12), ಕೊಪ್ಪಳ (11) ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕಲಬುರಗಿ ಜಿಲ್ಲೆಯಲ್ಲಿ ಇಂದು 50 ಸೋಂಕಿತರು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬೆಂಗಳೂರು ನಗರದಲ್ಲಿ 41 ಸೋಂಕಿತರು, ವಿಜಯಪುರದಲ್ಲಿ 10, ಬೀದರ್ ನಲ್ಲಿ 12 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 149 ಕೋವಿಡ್ 19 ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇಂದು ವಿದೇಶದಿಂದ ರಾಜ್ಯಕ್ಕೆ ಬಂದ 08 ಜನರಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಪತ್ತೆಯಾಗಿದ್ದು 75 ಜನ ಸೋಂಕಿತರು ಅಂತರ್ ರಾಜ್ಯ ಪ್ರಯಾಣದ ಹಿನ್ನಲೆಯನ್ನು ಹೊಂದಿದವರಾಗಿದ್ದಾರೆ.