ಹೊಸದಿಲ್ಲಿ: ದೇಶದಲ್ಲಿ 24 ಅವಧಿಯಲ್ಲಿ 39,742 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಅವಧಿಯಲ್ಲಿ 535 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ, ದೇಶದ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 3,13,71,901ಕ್ಕೆ ಏರಿಕೆಯಾಗಿದೆ. ಇದುವರೆಗೆ ದೇಶದಲ್ಲಿ 4,20,551 ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಚೆಲ್ಲಿದ ಶಾಸಕ ಅಭಯ ಪಾಟೀಲ್
ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ 18,531 ಪ್ರಕರಣಗಳು, ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 6,269 ಪ್ರಕರಣಗಳು, ಆಂಧ್ರಪ್ರದೇಶದಲ್ಲಿ 2,174 ಪ್ರಕರಣಗಳು, ಒಡಿಶಾದಲ್ಲಿ 1,864 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,857 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಐದು ರಾಜ್ಯಗಳು ದೇಶದ ಶೇಕಡಾ 77.23 ರಷ್ಟು ಹೊಸ ಪ್ರಕರಣಗಳಿಗೆ ಕಾರಣವಾಗಿದ್ದು, ಕೇರಳ ರಾಜ್ಯವೊಂದೇ 46.63 ರಷ್ಟು ಹೊಸ ಪ್ರಕರಣಗಳಿಗೆ ಕಾರಣವಾಗಿದೆ.
ದೇಶದಲ್ಲಿಂದು 535 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಅದರಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ 234 ಮಂದಿ ಮೃತಪಟ್ಟಿದ್ದರೆ, ಕೇರಳ ರಾಜ್ಯದಲ್ಲಿ 98 ಮಂದಿ ಮೃತಪಟ್ಟಿದ್ದಾರೆ.