Advertisement

ರಾಜ್ಯದಲ್ಲಿಂದು 399 ಕೋವಿಡ್‌ ಪಾಸಿಟಿವ್‌ ಪತ್ತೆ: 6 ಮಂದಿ ಸಾವು

08:12 PM Dec 08, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬುಧ‌ವಾರ 399 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.

Advertisement

ರಾಜ್ಯದಲ್ಲಿ ಪತ್ತೆಯಾದ ಒಟ್ಟು 399 ಪ್ರಕರಣದಲ್ಲಿ ಬೆಂಗಳೂರು ನಗರದಲ್ಲಿ 244 ಪ್ರಕರಣ ಪತ್ತೆಯಾಗಿದೆ. ಚಿಕ್ಕಮಗಳೂರು 14, ದ.ಕ. 15, ಧಾರವಾಡ 10, ಕೊಡಗು 30, ಮೈಸೂರು 38, ತುಮಕೂರು ಜಿಲ್ಲೆ 10 ಪ್ರಕರಣ ದಾಖಲಾಗಿದ್ದು, ಉಳಿದಂತೆ ವಿಜಯಪುರ, ಉತ್ತರಕನ್ನಡ, ಉಡುಪಿ, ಶಿವಮೊಗ್ಗ , ಹಾಸನ, ಚಾಮರಾಜ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳ ವರದಿಯಾಗಿದೆ.

ಬಾಗಲಕೋಟೆ, ಬೀದರ್‌, ಚಿತ್ರದುರ್ಗಾ, ಗದಗ, ಹಾವೇರಿ, ಕೊಪ್ಪಳ, ರಾಯಚೂರು,ರಾಮನಗರ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಾವತ್ ಒಬ್ಬ ಅತ್ಯುತ್ತಮ ಸೈನಿಕ,ನಿಜವಾದ ದೇಶಭಕ್ತ: ಪ್ರಧಾನಿ ಮೋದಿ

ಬೆಂಗಳೂರು ನಗರ 3, ಕೊಪ್ಪಳ, ಕೊಡಗು, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂತ ಒಟ್ಟು 7255ಸಕ್ರಿಯ ಪ್ರಕರಣಗಳಿವೆ.

Advertisement

238ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಪಾಸಿಟಿವ್‌ ಪ್ರಕರಣ ಶೇ. 0.36ರಿಂದ ಶೇ.34ಕ್ಕೆ ಹಾಗೂ ಮರಣ ಪ್ರಮಾಣ ಶೇ. 2ರಿಂದ 1.50ಕ್ಕೆ ಇಳಿಕೆಯಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next