Advertisement

ಯಾದಗಿರಿ ಜಿಲ್ಲೆಯಲ್ಲಿ ಮೇ.19 ರಿಂದ 21 ರ ವರೆಗೆ ಸಂಪೂರ್ಣ ಲಾಕ್ ಡೌನ್

08:41 PM May 16, 2021 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ೨ನೇ ಅಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ 3 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆದೇಶ ಹೊರಡಿಸಿದ್ದಾರೆ.

Advertisement

ಮೇ19ರ ಬೆಳಿಗ್ಗೆ 6 ಗಂಟೆಯಿಂದ 21ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆ, ಔಷಧಿ ಅಂಗಡಿ ಹಾಗೂ ಅಂಬ್ಯುಲೆನ್ಸ್, ಪೆಟ್ರೋಲ್ ಪಂಪ್ ಸೇರಿ ಇತರೆ ತುರ್ತು ಸೇವೆಗಳನ್ನು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ಈ ವೇಳೆಯಲ್ಲಿ ತರಕಾರಿ ಮತ್ತು ಕಿರಾಣಿ ಅಂಗಡಿಗಳು ಸಹ ಬಂದ್ ಆಗಿರಲಿದೆ. ಹೋಟೆಲ್‌ಗಳಲ್ಲಿ  ನೀಡುತ್ತಿದ್ದ ಪಾರ್ಸಲ್‌ಗೂ ಅವಕಾಶವಿರಲ್ಲ. ದಿನಪತ್ರಿಕೆ, ಎಟಿಎಂ ಎಂದಿನಂತೆ ಇರಲಿದೆ. ಎಲ್ಲಾ ರೀತಿಯ ಸರಕು ಸಾಗಣೆ ಮತ್ತು ಖಾಲಿ ವಾಹನಗಳಿಗೆ ಅನುಮತಿ, ಆಸ್ಪತ್ರೆಗೆ ಹೋಗುವವರು ಚೆಕ್ ಪೋಸ್ಟ್ಗಳಲ್ಲಿ ವೈದ್ಯಕೀಯ ದಾಖಲೆ ತೋರಿಸುವುದು, ಅಂತ್ಯ ಸಂಸ್ಕಾರಕ್ಕೆ ಕೇವಲ 5 ಜನರಿಗೆ ಅವಕಾಶ, ಮದುವೆ ಸಮಾರಂಭಕ್ಕೆ ತಹಸೀಲ್ದಾರರಿಂದ ಅನುಮತಿ ಪಡೆದು 10 ಜನರು ಮಾತ್ರ ಮನೆಯ ಒಳಗಡೆ ನಡೆಸಬಹುದು ಹಾಗೂ ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳ ಉಪಹಾರ/ಊಟದ ವ್ಯವಸ್ಥೆ ಕಲ್ಪಿಸುವುದು ಸಂಬಂಧಪಟ್ಟ ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next