Advertisement

‘#3kaDream’ ; ವಿಶ್ವಕಪ್ ಮೊದಲು ಹೊಸ ವಿಡಿಯೋ ಬಿಡುಗಡೆ ಮಾಡಿದ ಅಡಿಡಾಸ್

06:36 PM Sep 20, 2023 | Team Udayavani |

ಮುಂಬಯಿ: ಭಾರತ ಕ್ರಿಕೆಟ್ ತಂಡದ ಏಕದಿನ ವಿಶ್ವಕಪ್ ಅಭಿಯಾನದ ಮೊದಲು ಬಿಸಿಸಿಐ ನ ಅಧಿಕೃತ ಕಿಟ್ ಪ್ರಾಯೋಜಕ ಅಡಿಡಾಸ್ ಹೊಚ್ಚ ಹೊಸ ವಿಡಿಯೊಯೊಂದನ್ನು ಬಿಡುಗಡೆ ಮಾಡಿದೆ.

Advertisement

1983 ಮತ್ತು 2011 ರಲ್ಲಿ ಭಾರತದ ವಿಶ್ವಕಪ್ ಗೆಲುವಿನ ಅಂಶಗಳನ್ನು ಸಂಯೋಜಿಸಲಾಗಿರುವ ವಿಡಿಯೋ ದಲ್ಲಿ ‘3kaDream’ಮೂರನೇ ಕನಸು ಎಂದು ಬರೆಯಲಾಗಿದೆ.

1983 – ಕಿಡಿ 2011 – ವೈಭವ, 2023 – ಕನಸು. ಅಸಾಧ್ಯವಲ್ಲ ನಮ್ಮೀ ಕನಸು #3kaDream ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.

 

Advertisement

ಭಾರತ ತಂಡದ ಹೊಸ ಜೆರ್ಸಿಯನ್ನು ಆಟಗಾರರು ಧರಿಸಿದ್ದು, ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ ಕೂಟದಲ್ಲಿ ಆಟಗಾರರು ಇದನ್ನು ಧರಿಸಿ ಆಡಲಿದ್ದಾರೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶುಭಮನ್ ಗಿಲ್, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್ ಅವರು ವಿಡಿಯೋ ದಲ್ಲಿ ಕಾಣಿಸಿಕೊಂಡಿದ್ದು, ಸ್ಟಾರ್ ರ‍್ಯಾಪರ್ ರಾಫ್ತಾರ್ ಅವರು ಹಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದೆ.

ಅ. 8 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ವಿಶ್ವಕಪ್ ಗೆ ಪ್ರಕಟಿಸಲಾಗಿರುವ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್

Advertisement

Udayavani is now on Telegram. Click here to join our channel and stay updated with the latest news.

Next