Advertisement

3ನೇ ಸೋಂಕು ಮುಕ್ತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ

06:28 AM Jun 02, 2020 | Suhan S |

ಕೊಪ್ಪಳ: ಮಹಾರಾಷ್ಟ್ರದಿಂದ ಆಗಮಿಸಿದ್ದ ಕುಷ್ಟಗಿ ತಾಲೂಕಿನ ಮಾಲಗಿತ್ತಿಯ ನಿವಾಸಿ ಪಿ-1173 ಎಂಬ ವ್ಯಕ್ತಿಯು ಕೋವಿಡ್ ಸೋಂಕಿನಿಂದ ಮುಕ್ತರಾದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಈಚೆಗೆ ಇಬ್ಬರು ಸೊಂಕಿನಿಂದ ಮುಕ್ತರಾಗಿದ್ದು ಇವರನ್ನು ಒಳಗೊಂಡಂತೆ ಮೂವರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

Advertisement

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದ ನಿವಾಸಿ ಪಿ-1173 ಅವರು ಮಹಾರಾಷ್ಟ್ರದಿಂದ ಮೇ 15ರಂದು ಜಿಲ್ಲೆಗೆ ಆಗಮಿಸಿದ್ದರು. ಅನ್ಯ ರಾಜ್ಯಗಳಿಂದ ಆಗಮಿಸುವ ಜನರ ಮೇಲೆ ಹೆಚ್ಚು ನಿಗಾ ಇರಿಸಿದ್ದ ಜಿಲ್ಲಾಡಳಿತ ಕೂಡಲೇ ವ್ಯಕ್ತಿಯ ಮಾಹಿತಿ ಪಡೆದು ಅವರನ್ನು ಕ್ವಾರೆಂಟೈನ್‌ ನಲ್ಲಿರಿಸಿ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡಿತ್ತು. ಆ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಕೊಪ್ಪಳ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯ ಐಸೋಲೇಷನ್‌ ವಾರ್ಡಿನಲ್ಲಿರಿಸಿ ಚಿಕಿತ್ಸೆ ನೀಡಲಾರಂಭಿಸಿತು. 16 ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರ ತಂಡವು ಮೇ 30ರಂದು ಪುನಃ ಸರ್ಕಾರದ ನಿಯಮಾವಳಿ ಪ್ರಕಾರ ಅವರ ಗಂಟಲು ದ್ರವ ಪಡೆದುಮತ್ತೂಮ್ಮೆ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದು, ಈ ವೇಳೆ ಅವರ ವರದಿ ನೆಗೆಟಿವ್‌ ಬಂದಿದ್ದರಿಂದ ಅವರನ್ನು ಸೋಂಕುಮುಕ್ತ ಎಂದು ನಿರ್ಧರಿಸಿ ಅವರನ್ನು ಸೋಮವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಿದರು.

ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ|ಎಸ್‌.ಬಿ.ದಾನರಡ್ಡಿ ಹಾಗೂ ವೈದ್ಯರ ತಂಡ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳ ತಂಡವು ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಬಿಡುಗಡೆ ಮಾಡಿತು. ಜಿಲ್ಲೆಯಲ್ಲಿ ಈ ವರೆಗೂ ನಾಲ್ಕು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲಾಡಳಿತ ಮುಂಜಾಗ್ರತೆಯಿಂದ ಜಿಲ್ಲೆಯಲ್ಲಿ ವಿವಿಧ ಕ್ವಾರೆಂಟೆನ್‌ ಕೇಂದ್ರ ಹಾಗೂ ಆಸ್ಪತ್ರೆಗಳನ್ನು ಆರಂಭಿಸಿತು. ಸೋಂಕಿತರು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈಚೆಗೆ ಪಿ-1174 ಹಾಗೂ ಪಿ-1175 ಎಂಬ ಇಬ್ಬರು ಸೋಂಕಿನಿಂದ ಮುಕ್ತರಾದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಯಿತು. ಇನ್ನೂ ಸೋಮವಾರ ಪಿ-1173 ಎಂಬ ವ್ಯಕ್ತಿಯು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದ್ದು, 14 ದಿನ ಅವರನ್ನು ಮನೆಯಲ್ಲಿಯೇ ಕ್ವಾರೆಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಒಟ್ಟಾರೆ ಮೂವರು ಸೋಂಕಿತರು ಗುಣಮುಖರಾದಂತಾಗಿದೆ. ಇನ್ನೂ ಪಿ-2254 ಎಂಬ ಸೋಂಕಿನು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next