Advertisement

3ನೇ ಹಂತದ ಅನ್ ಲಾಕ್ ಘೋಷಣೆ : ದೇವಸ್ಥಾನ, ಮಾಲ್ ಗಳಿಗೆ ಅನುವು : ಸಿನಿ ಪ್ರಿಯರಿಗೆ ಶಾಕ್

07:26 PM Jul 03, 2021 | Team Udayavani |

ಬೆಂಗಳೂರು : ಜುಲೈ 5 ರಿಂದ 19 ರವರೆಗೆ ಮೂರನೇ ಹಂತದ ಅನ್ ಲಾಕ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

Advertisement

ರಾಜ್ಯದಲ್ಲಿ ಕೋವಿಡ್ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಅನ್ ಲಾಕ್  ಘೋಷಣೆ ಮಾಡಲು ಸಿಎಂ ಯಡಿಯೂರಪ್ಪ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.

ಅನ್ ಲಾಕ್ 3.0 ನಲ್ಲಿ ಯಾವುದಕ್ಕೆ ಸಡಿಲಿಕೆ :

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

Advertisement

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

• ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
• ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next