Advertisement

ಎರಡೂ ಕ್ಷೇತ್ರಗಳಲ್ಲಿ ನೋಟಾ ಮತಗಳಿಗೆ 3ನೇ ಸ್ಥಾನ!

12:14 AM Jun 05, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಹೊರತು ಪಡಿಸಿದರೆ ಮೂರನೇ ಅತೀ ಹೆಚ್ಚು ಮತಗಳು ನೋಟಾಕ್ಕೆ ಬಿದ್ದಿವೆ! ಬರೋಬ್ಬರಿ 23,576 ಮತಗಳನ್ನು ನೋಟಾ ಪಡೆದುಕೊಂಡಿದೆ.

Advertisement

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಚಲಾವಣೆಯಾಗಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಹೋಗಿದೆ.2014ರ ಲೋಕಸಭಾ ಚುನಾವಣೆಯಲ್ಲಿ 7,109 ಮತ್ತು 2019ರ ಚುನಾವಣೆಯಲ್ಲಿ 7,380 ಮತಗಳು ನೋಟಾಕ್ಕೆ ಬಿದ್ದಿದ್ದವು.

ಅಭಿಯಾನದ ಪರಿಣಾಮ?
ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳು ಸ್ಪಂದಿಸಿಲ್ಲ, ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟ ಸಮಿತಿಯಿಂದ ನೋಟಾಕ್ಕೆ ಮತ ಚಲಾಯಿಸುವಂತೆ ಸಾರ್ವ ಜನಿಕರಲ್ಲಿ ಮನವಿ ಮಾಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲೂ ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆದಿತ್ತು. ಬೆಳ್ತಂಗಡಿ – ಸುಳ್ಯ ತಾಲೂಕಿನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ನೋಟಾಕ್ಕೆ ಮತ ಚಲಾಯಿಸುವಂತೆ ಸಮಿತಿಯ ಪ್ರಮುಖರು ಆಗ್ರಹಿಸಿದ್ದರು. ಅಭಿ ಯಾನದ ಪರಿಣಾಮವೋ ಎಂಬಂತೆ ಈ ಬಾರಿ ನೋಟಾ ಮತಗಳು ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿವೆ.

ನೋಟಾಕ್ಕೆ ಬಿದ್ದ ಮತಗಳು ಹೆಚ್ಚಾದರೂ ಇದು ಗೆಲುವಿನ ಮೇಲೆ ಪರಿಣಾಮ ಯಾವುದೇ ಬೀರಿಲ್ಲ. ಆದರೆ ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳಿಗೆ ಪಕ್ಷಗಳಿಗೆ ಇದೊಂದು ಎಚ್ಚರಿಕೆಯ ಗಂಟೆಯೂ ಹೌದು.

ಉಡುಪಿ: ಕಾರ್ಕಳದಲ್ಲಿ ಅತೀ ಹೆಚ್ಚು ನೋಟಾ
ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ 7,510 ನೋಟ ಮತಗಳು ಚಲಾವಣೆಯಾಗಿದ್ದರೆ ಈ ಬಾರಿ 11,269 ಚಲಾವಣೆಯಾಗಿದೆ. ಕಾರ್ಕಳ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತ ಚಲಾವಣೆಯಾಗಿರುವುದು ವಿಶೇಷ. ವಿಧಾನಸಭಾ ಕ್ಷೇತ್ರವಾರು ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿದೆ. ಚುನಾವಣೆ ಪೂರ್ವದಲ್ಲಿ ಕೆಲವು ಸಂಘಟನೆಗಳು ನೋಟಾ ಅಭಿಯಾನ ನಡೆಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next