Advertisement

ದಂಡಗುಂಡ ದೇಗುಲ ನಿರ್ಮಾಣಕ್ಕೆ 4.60 ಕೋಟಿ

03:52 PM Aug 17, 2022 | Team Udayavani |

ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ವಿನ್ಯಾಸವನ್ನು ಈಗಾಗಲೇ ಕಲಬುರಗಿಯ ಖಂಡೇರಾವ್‌ ರಚಿಸಿದ್ದು, 4.60ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದು ಬಸವೇಶ್ವರ ದೇವಸ್ಥಾನ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ತಿಳಿಸಿದರು.

Advertisement

ತಾಲೂಕಿನ ದಂಡಗುಂಡ ದೇವಸ್ಥಾನದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಹುಂಡಿಯಲ್ಲಿ 23 ಲಕ್ಷ ರೂ. ಸಂಗ್ರಹವಾಗಿದ್ದು, ಈ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಲಾಗಿದೆ. ಯಾವುದೇ ಹಣಕಾಸಿನ ವ್ಯವಹಾರವಾಗಲಿ ಚೆಕ್‌ ಮೂಲಕವೇ ಮಾಡಲಾಗುತ್ತಿದೆ. ಹೀಗಾಗಿ ಇಲ್ಲಿ ಯಾವುದೇ ಅವ್ಯವಹಾರಕ್ಕೆ ಆಸ್ಪದವಿಲ್ಲ ಎಂದು ಹೇಳಿದರು. ಕಟ್ಟಡ ನಿರ್ಮಾಣದ ಗುತ್ತಿಗೆದಾರರಿಗೆ 50ಲಕ್ಷ ರೂ. ಮುಂಗಡವಾಗಿ ನೀಡಲಾಗಿದೆ. ಮುಂದೆ ಹಂತ ಹಂತವಾಗಿ ಹಣ ನೀಡಲಾಗುವುದು. ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ 8ರಿಂದ 10ಕೋಟಿ ರೂ. ಖರ್ಚಾಗಲಿದೆ. ಹೀಗಾಗಿ ದೇಣಿಗೆ ಸಂಗ್ರಹ ಮಾಡಲು ಪ್ರಮುಖರ ಎರಡು ತಂಡಗಳನ್ನು ಮಾಡಿ ಹಳ್ಳಿ ಹಳ್ಳಿಗೆ ಸಂಚರಿಸಿ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಹೇಳಿದರು.

ಟ್ರಸ್ಟ್‌ ಕಮಿಟಿ ಪದಾ ಕಾರಿಗಳಾದ ಬಿ.ಜಿ.ಪಾಟೀಲ, ಚಂದ್ರಶೇಖರ ಅವಂಟಿ, ಭೀಮಣ್ಣ ಸಾಲಿ, ಭೀಮರಾಯಗೌಡ ಚಾಮನೂರ, ಮಹಾಂತಗೌಡ ಪಾಟೀಲ, ಬಸವರಾಜಪ್ಪಗೌಡ, ರಾಜಶೇಖರ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next