Advertisement

ಶಾಲೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಪಶ್ಚಿಮ ಬಂಗಾಳ ಪೊಲೀಸರಿಂದ ನಾಲ್ವರ ಬಂಧನ

03:17 PM Sep 18, 2022 | Team Udayavani |

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಟಿಟಾಘರ್ ಫ್ರೀ ಇಂಡಿಯಾ ಹೈಸ್ಕೂಲ್‌ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ.

Advertisement

ತರಗತಿಗಳು ನಡೆಯುತ್ತಿರುವಾಗ ಶಾಲೆಯ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿತ್ತು ಇದಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಅರಿಯನ್, ಶೇಖ್ ಬಬ್ಲು, ಸಾದಿಕ್ ಮತ್ತು ರೆಹಾನ್ ಎಂದು ಗುರುತಿಸಲಾಗಿದೆ. ಬಂಧಿತ ನಾಲ್ವರನ್ನು ಭಾನುವಾರ (ಇಂದು) ಬ್ಯಾರಕ್‌ಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ನಾಲ್ವರಲ್ಲಿ ಒಬ್ಬರು ಶಾಲೆಯ ಮಾಜಿ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಫೋರೆನ್ಸಿಕ್ ತನಿಖೆಗೆ ಆದೇಶಿಸಲಾಗಿದೆ.

ಬಂಧಿತ ಆರೋಪಿಗಳು ಶಾಲೆಯ ಆವರಣದ ಮೇಲೆ ಏಕೆ ದಾಳಿ ಮಾಡಿದ್ದಾರೆ ಎಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಶನಿವಾರ ರಾತ್ರಿ ಅವರನ್ನು ಕರೆದುಕೊಂಡು ಹೋಗಲಾಗಿತ್ತು ಆದರೆ ನಾಲ್ವರು ವಿಚಾರಣೆ ವೇಳೆ ಏನನ್ನೂ ಹೇಳಲಿಲ್ಲ ಎಂದು ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ : ಕಾಲಿವುಡ್‌ಗೆ ಮತ್ತೊಂದು ಆಘಾತ!: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next