Advertisement

ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ

07:34 PM May 28, 2022 | Team Udayavani |

ಮುಂಬಯಿ : ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ನಾಲ್ವರು ಬಿ.ಎ. 4 ಒಮಿಕ್ರಾನ್ ರೂಪಾಂತರಿ ಮತ್ತು ಮೂರು ಪ್ರಕರಣಗಳು ಬಿ.ಎ.5 ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Advertisement

ಮಹಾರಾಷ್ಟ್ರ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ ಈ ಬಗ್ಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಎಲ್ಲಾ ರೋಗಿಗಳು ಕೇವಲ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಏಳು ರೋಗಿಗಳು, ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಪುಣೆಯಿಂದ ಬಂದವರು ಮತ್ತು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ.

ಬಿಎ.4 ಮತ್ತು ಬಿಎ.5 ಕೊರೊನಾ ವೈರಸ್‌ನ ಹೆಚ್ಚು ಹರಡುವ ಒಮಿಕ್ರಾನ್ ರೂಪಾಂತರದ ಉಪ-ವಂಶಗಳು ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಕಂಡುಬಂದಿವೆ, ಆದರೆ ಇದುವರೆಗೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next