Advertisement

ಅಕ್ರಮ ಕಲ್ಲಿದ್ದಲು ಗಣಿ ಕುಸಿತ; 4 ಮೃತದೇಹ ಪತ್ತೆ, ಹಲವರು ಸಿಲುಕಿರುವ ಭೀತಿ

07:16 PM Feb 01, 2022 | Team Udayavani |

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯ ವೇಳೆ ಕೈಬಿಟ್ಟ ಮೂರು ಕಲ್ಲಿದ್ದಲು ಗಣಿಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

Advertisement

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ (ECL) ಗೋಪಿನಾಥಪುರ ಓಪನ್ ಕಾಸ್ಟ್ ಪ್ರಾಜೆಕ್ಟ್‌ನಿಂದ (OCP) ಕಲ್ಲಿದ್ದಲು ಕಂಪನಿಗಳಿಂದ ನೇಮಕಗೊಂಡ ರಕ್ಷಣಾ ತಂಡವು ಮೂವರು ಮಹಿಳೆಯರು ಮತ್ತು ಒಬ್ಬ ಬಾಲಕಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಧನ್‌ಬಾದ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರೇಮ್ ಕುಮಾರ್ ತಿವಾರಿ ಹೇಳಿದ್ದಾರೆ.

ನಿರ್ಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿರುವ ತಿವಾರಿ, ಇತರರಿಗಾಗಿ ಶೋಧ ಮುಂದುವರೆದಿದೆ ಎಂದು ಹೇಳಿದ್ದಾರೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಧನಬಾದ್‌ನ ನಿರ್ಸಾದಲ್ಲಿರುವ ಕಲ್ಲಿದ್ದಲು ಗಣಿಯಿಂದ ಕೆಲವು ಸಾವುನೋವುಗಳು ವರದಿಯಾಗಿವೆ. ಜಿಲ್ಲಾಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇವರು ಅಗಲಿದವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳಿಗೆ ನೆರವು ನೀಡಲಾಗುತ್ತಿದೆ’ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next