ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವಂತೆ ತೆಲಂಗಾಣ ವಿಧಾನಸಭೆ ಚುನಾವಣೆಗೆ ಜುಬ್ಲಿ ಹಿಲ್ಸ್ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ತೆಲಂಗಾಣದ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ.
ಜುಬಿಲಿ ಹಿಲ್ಸ್ ಕ್ಷೇತ್ರದಿಂದ ನವೆಂಬರ್ 30 ರಂದು ಚುನಾವಣೆಗೆ ಸ್ಪರ್ಧಿಸುತ್ತಿರುವ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ) ಅಧ್ಯಕ್ಷರಾಗಿದ್ದಾಗ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಜರುದ್ದೀನ್ ಸೇರಿದಂತೆ ಎಚ್‌ಸಿಎಯ ಪದಾಧಿಕಾರಿಗಳು ಮತ್ತು ಹಿಂದಿನ ಸದಸ್ಯರ ವಿರುದ್ಧ ರಾಚಕೊಂಡ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಅತ್ತ ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ನಾಲ್ಕು ಪ್ರಕರಣಗಳಲ್ಲಿ ಜಾಮೀನು ಕೋರಿ ಅಜರುದ್ದೀನ್ ಮಲ್ಕಾಜ್‌ಗಿರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅಜರುದ್ದೀನ್, ಇದು “ನನ್ನ ಪ್ರತಿಸ್ಪರ್ಧಿಗಳು ನನ್ನ ವಿರುದ್ಧ ಮಾಡಿರುವ ಪಿತೂರಿ, ದಾಖಲಾಗಿರುವ ದೂರುಗಳು ಎಲ್ಲವೂ ಸುಳ್ಳು, ನಾನು ಚುನಾವಣೆಯಲ್ಲಿ ಸ್ಫರ್ದಿಸುವ ಕಾರಣ ನನ್ನ ಘನತೆಗೆ ಧಕ್ಕೆ ಉಂಟು ಮಾಡಲು ಮಾಡಿರುವ ಪಿತೂರಿ, ಆದರೆ ಯಾರು ಏನೇ ಮಾಡಿದರೂ ನಮಗೆ ಯಾವುದೇ ತೊಂದರೆ ಆಗುವುದಿಲ್ಲ ಚುನಾವಣೆ ಸ್ಪರ್ದಿಸುತ್ತೇನೆ, ರಾಜ್ಯದ ಜನತೆ ನನ್ನ ಪರವಾಗಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Kerala ತ್ರಿವಳಿ ಸ್ಫೋಟ: ಗಂಭೀರ ಗಾಯಗೊಂಡಿದ್ದ ವೃದ್ದೆ ಮೃತ್ಯು, ಸಾವಿನ ಸಂಖ್ಯೆ 4ಕ್ಕೆ ಏರಿಕೆ