Advertisement

ಬಾಲ್ ಎಂದು ಭಾವಿಸಿ ಕಚ್ಚಾ ಬಾಂಬ್‌ನಲ್ಲಿ ಆಟ: ಸ್ಫೋಟಗೊಂಡು ನಾಲ್ವರು ಮಕ್ಕಳಿಗೆ ಗಾಯ

07:53 PM Apr 24, 2022 | Team Udayavani |

ಇಂಗ್ಲಿಷ್ ಬಜಾರ್: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಭಾನುವಾರ ಬಾಲ್ ಎಂದು ಭಾವಿಸಿ ಆಟವಾಡಲು ಪ್ರಾರಂಭಿಸಿದ ಕಚ್ಚಾ ಬಾಂಬ್‌ಗಳು ಸ್ಫೋಟಗೊಂಡಿದ್ದರಿಂದ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕಾಲಿಯಾಚಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲ್‌ಗಂಜ್‌ನಲ್ಲಿ ಈ ಘಟನೆ ನಡೆದಿದೆ. ಚೆಂಡುಗಳು ಎಂದು ಭಾವಿಸಿ ಅವರು ಕಚ್ಚಾ ಬಾಂಬ್‌ಗಳನ್ನು ಎತ್ತಿಕೊಂಡು ಆಟವಾಡಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್‌ಗಳು ಸ್ಫೋಟಗೊಂಡಿದ್ದು, ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿದ್ದು, ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಬಾಲಕರು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಮಸೀದಿಯ ಪಕ್ಕದಲ್ಲಿರುವ ಲಿಚಿ ಮರದ ಕೆಳಗೆ ಬಾಂಬ್‌ಗಳನ್ನು ಇಟ್ಟವರು ಯಾರು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದೇವೆ. ಪೊಲೀಸರು ಈ ಪ್ರದೇಶವನ್ನು ಸುತ್ತುವರಿದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತವ ಮೈತಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next