Advertisement

Udupi: ವಾರದ 4 ದಿನ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರ: ಅಜೀಂ ಪ್ರೇಮ್‌ಜಿ ಫೌಂಡೇಷನ್‌

12:06 AM Sep 26, 2024 | Team Udayavani |

ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ರಾಜ್ಯ ಸರಕಾರದ ಅನುದಾನದಿಂದ ವಾರಕ್ಕೆ
2 ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿತ್ತು. ಈಗ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ ಉಳಿದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಬುಧವಾರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು.

Advertisement

ವಿದ್ಯಾರ್ಥಿಗಳು ಭೌತಿಕ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆ ಸಹಕಾರಿಯಾಗಿದ್ದು, ಸರಕಾರ ದೊಂದಿಗೆ ಒಡಂಬಡಿಕೆ ಮಾಡಿಕೊಂಡು ಯೋಜನೆ ಜಾರಿಗೆ ತರಲಾಗಿದೆ.

ವಾರದ ಎಲ್ಲ ದಿನಗಳಲ್ಲೂ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು 1,500 ಕೋ. ರೂ. ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದರು.

ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ., ಬಿಇಒ ಡಾ| ಯಲ್ಲಮ್ಮ, ಪಿಎಂ ಪೋಷಣ್‌ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ| ಅಶೋಕ ಕಾಮತ್‌, ಡಯಟ್‌ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕ ವಿವೇಕ್‌ ಗಾಂವ್ಕರ್‌, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್‌, ಉಪ ಪ್ರಾಂಶುಪಾಲೆ ಭಾಗೀರಥಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next