Advertisement

Road Mishap: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು

09:03 AM Nov 11, 2023 | Team Udayavani |

ಚಂಡೀಗಢ: ಹರ್ಯಾಣದ ಗುರುಗ್ರಾಮ್ ಬಳಿ ದೆಹಲಿ-ಜೈಪುರ ಹೆದ್ದಾರಿಯಲ್ಲಿ ಶುಕ್ರವಾರ ತೈಲ ಟ್ಯಾಂಕರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ತೈಲ ಟ್ಯಾಂಕರ್ ಮೂವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಸಿಎನ್‌ಜಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕಾರು ಬೆಂಕಿಗಾಹುತಿಯಾಗಿದೆ ಪರಿಣಾಮ ಕಾರಿನಲ್ಲಿದ್ದ ಮೂವರು ಸುಟ್ಟು ಕಾರಕಲಾಗಿದ್ದಾರೆ, ಕಾರಿಗೆ ಡಿಕ್ಕಿ ಹೊಡೆದ ಬಳಿಕ ಟ್ಯಾಂಕರ್ ಮುಂದೆ ಸಾಗಿ ಎದುರಿಗೆ ಇದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಪಿಕ್ ಅಪ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಬಳಿಕ ಟ್ಯಾಂಕರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಕಾರಿನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರಿನಲ್ಲಿದ್ದ ಮೂವರು ಬೆಂಕಿಗಾಹುತಿಯಾಗಿದ್ದಾರೆ ಎಂದು ತನಿಖಾ ಅಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ಆರೋಪಿ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Deepfake: ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿಕೊಂಡ ದೆಹಲಿ ಪೊಲೀಸರು

Advertisement
Advertisement

Udayavani is now on Telegram. Click here to join our channel and stay updated with the latest news.

Next