ಚೆನ್ನೈ: ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ.
ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋಡೌನ್‌ನಲ್ಲಿ ಅವಘಡ ಸಂಭವಿಸಿದ್ದು, ಸ್ಫೋಟದಲ್ಲಿ ಮೃತಪಟ್ಟವರನ್ನು ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್ ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ರಕ್ಷಣೆ ಮಾಡಿ ಮಯಿಲಾಡುತುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಗೋಡೌನ್ ಮಾಲೀಕ ಮೋಹನ್ ಎಂದು ಗುರುತಿಸಲಾಗಿದ್ದು ಸ್ಫೋಟಕ್ಕೆ ಸಂಬಂಧಿಸಿದಂತೆ ಮೋಹನ್ ನನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಫೋಟದಿಂದ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ: Delhi Court: ಪತ್ನಿಯಿಂದ ಮಾನಸಿಕ ಹಿಂಸೆ: ಶಿಖರ್ ಧವನ್ ವಿಚ್ಛೇದನಕ್ಕೆ ಕೋರ್ಟ್ ಸಮ್ಮತಿ