Advertisement

Train Mishap: ಬೆಳ್ಳಂಬೆಳಗ್ಗೆ ರೈಲಿನಲ್ಲಿ ಬೆಂಕಿ ಅವಘಡ: 9 ಮಂದಿ ಮೃತ್ಯು, ಹಲವರಿಗೆ ಗಾಯ

09:43 AM Aug 26, 2023 | Team Udayavani |

ಚೆನ್ನೈ: ಲಕ್ನೋದಿಂದ ರಾಮೇಶ್ವರಂಗೆ ತೆರಳುತ್ತಿದ್ದ  ಪ್ರವಾಸಿ ರೈಲಿನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂಬತ್ತು  ಮಂದಿ ಸಾವನ್ನಪ್ಪಿ ಹಲವಾರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ಮಧುರೈ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು. ಕೋಚ್‌ನಲ್ಲಿದ್ದ ಗ್ಯಾಸ್ ಸಿಲಿಂಡರ್‌ ಸೋರಿಕೆಯಾಗಿರುವುದೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಎನ್ನಲಾಗಿದ್ದು ಪರಿಣಾಮ ಪ್ರಯಾಣಿಕರು ರೈಲಿನೊಳಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರವಾಸಿ ಕೋಚ್ ಲಕ್ನೋದಿಂದ ಮಧುರೈಗೆ ಆಗಮಿಸಿದಾಗ ಘಟನೆ ಬೆಳಿಗ್ಗೆ 5.15 ರ ಸುಮಾರಿಗೆ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್ 23 ‘ಬಾಹ್ಯಾಕಾಶ ದಿನ’ವಾಗಿ ಆಚರಿಸೋಣ: ವಿಜ್ಞಾನಿಗಳನ್ನು ಅಭಿನಂದಿಸಿ ಪ್ರಧಾನಿ ಹೇಳಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next