ರಾಜಸ್ಥಾನ: 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆ ಮೇಲಿಂದ ರೈಲ್ವೆ ಹಳಿ ಮೇಲೆ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.
ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರ ಸಹಕಾರದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು ಈ ವೇಳೆ ಗಂಭೀರ ಗಾಯಗೊಂಡಿದ್ದ ನಾಲ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆಯ ತನಿಖೆಗಾಗಿ ಎಸ್ ಡಿಎಮ್ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ” ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ಹೇಳಿದ್ದಾರೆ.
2:15 ಕ್ಕೆ ಮೇಲ್ಸೇತುವೆಯಿಂದ ಬಸ್ಸು ಹಾದು ಹೋಗುವ ವೇಳೆ ದೌಸಾದ ರೈಲ್ವೆ ಹಳಿ ಮೇಲೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Shivamogga: ಅನುಮಾನಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಪೌಡರ್