ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇರುವ ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಇರುವ ಜ್ಞಾನವಾಪಿ ಮಸೀದಿಯನ್ನು ಸರ್ವೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯನ್ನು ಜಿಲ್ಲಾ ಕೋರ್ಟ್ ಮಂಗಳವಾರ ಆದೇಶ ನೀಡಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದಿಂದ ಸರ್ವೆ ನಡೆಸುವ ಬಗ್ಗೆ ವಕೀಲ ವಿಷ್ಣುಶಂಕರ ಜೈನ್ ಅವರು ಕೋರಿಕೆ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಕೋರಿಕೆಗೆ ಸಮ್ಮತಿ ಸೂಚಿಸಿದ್ದಾರೆ.
ಜತೆಗೆ ಮಸೀದಿ ಆಡಳಿತ ಮಂಡಳಿಗೆ ನೋಟಿಸ್ ನೀಡಿ, ಮೇ 19ರ ಒಳಗಾಗಿ ಉತ್ತರ ನೀಡುವಂತೆ ಆದೇಶ ನೀಡಿದ್ದಾರೆ. 22ರಂದು ಮುಂದಿನ ವಿಚಾರಣೆ ನಡೆಯಲಿದೆ.
ಕಳೆದ ಶುಕ್ರವಾರ ಅಲಹಾಬಾದ್ ಹೈಕೋರ್ಟ್ ಶಿವಲಿಂಗದ ಆಯಸ್ಸು ಅಳೆಯಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು ಎಂದು ಆದೇಶ ನೀಡಿತ್ತು.