ಮಾಸ್ಕೋ: ನಾಲ್ವರು ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಬಳಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ರಷ್ಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಎಂದು ಹೇಳಲಾಗಿದೆ, ವೆಲಿಕಿ ನವ್ಗೊರೊಡ್ ನಗರದ ಹತ್ತಿರದ ನವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು ಎಂದು ಹೇಳಲಾಗಿದೆ.
ನಾಲ್ವರ ಶವಗಳನ್ನು ಆದಷ್ಟು ಬೇಗ ಅವರ ಸಂಬಂಧಿಕರಿಗೆ ಕಳುಹಿಸಲು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ರಷ್ಯಾದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ ಎಂದು ಹೇಳಲಾಗುತ್ತಿದೆ.
ವೋಲ್ಖೋವ್ ನದಿಯಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಮುಳುಗುತ್ತಿರುವುದನ್ನು ಗಮನಿಸಿದ ಇತರ ನಾಲ್ವರು ಸಹಪಾಠಿಗಳು ಆಕೆಯ ರಕ್ಷಣೆಗೆ ಧಾವಿಸಿದ್ದಾರೆ ಈ ವೇಳೆ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ ಈ ವೇಳೆ ಅಲ್ಲಿದ್ದ ಕೆಲವರು ಓರ್ವ ಭಾರತೀಯನನ್ನು ರಕ್ಷಣೆ ಮಾಡಿದ್ದಾರೆ ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ. ರಕ್ಷಣೆ ಮಾಡಿರುವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Mangaluru: ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಹರೀಶ್ ಕುಮಾರ್